ಕೇಂದ್ರ ಗೃಹ ಸಚಿವ ಅಮಿತ್​ ಷಾ ತುರ್ತು ಸಭೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್​ ಷಾ ತುರ್ತು ಸಭೆಯೊಂದನ್ನು ನಡೆಸಿದ್ದಾರೆ. ಅಧಿಕಾರ ವಹಿಸಿಕೊಂಡ ನಂತರದಲ್ಲಿ ಅವರು ಆಯೋಜಿಸುತ್ತಿರುವ ಮೊದಲ ಉನ್ನತ ಮಟ್ಟದ ಸಭೆ ಇದಾಗಿದೆ.

ವಿದೇಶಾಂಗ ಸಚಿವ ಎಸ್​. ಜೈಶಂಕರ್​, ರೈಲ್ವೆ ಸಚಿವ ಪೀಯುಷ್​ ಗೋಯೆಲ್​, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್​, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಸೇರಿ ಆರು ಪ್ರಮುಖ ಸಚಿವರಲ್ಲದೆ ಬಿಜೆಪಿ ನಾಯಕಿ ಉಮಾ ಭಾರತಿ ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಇದಕ್ಕೂ ಮುನ್ನ ಗೃಹ ಸಚಿವ ಅಮಿತ್​ ಷಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ಅವಲೋಕಿಸಲು ಮತ್ತೊಂದು ಸಭೆ ನಡೆಸಿದ್ದರು. ಕಣಿವೆ ರಾಜ್ಯದಲ್ಲಿನ ಭದ್ರತಾ ವ್ಯವಸ್ಥೆ ಕುರಿತು ಮಾಹಿತಿ ಪಡೆದುಕೊಂಡರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಗೃಹ ಕಾರ್ಯದರ್ಶಿ ರಾಜೀವ್​ ಗೌಬಾ, ಹೆಚ್ಚುವರಿ ಕಾರ್ಯದರ್ಶಿ (ಕಾಶ್ಮೀರ) ಜ್ಞಾನೇಶ್​ ಕುಮಾರ್​ ಮತ್ತು ಗೃಹ ಸಚಿವಾಲಯದ ಹಲವು ಉನ್ನತಾಧಿಕಾರಿಗಳಿಂದ ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಮೂಲಸೌಕರ್ಯ ಯೋಜನೆಗಳ ಕುರಿತು ಚರ್ಚಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ