ಮಾಧ್ಯಮಗಳ ವರದಿಗಳನ್ನು ತಳ್ಳಿ ಹಾಕಿದ ಕೇಂದ್ರ

ದೆಹಲಿ,ಜೂ.05-ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ಷೇತ್ರಗಳ ವಿಂಗಡಣೆ ಬಗ್ಗೆ ಚರ್ಚಿಸಲಾಗಿದೆ ಮತ್ತು ನಿನ್ನೆ ಸಭೆಯಲ್ಲಿ ಕ್ಷೇತ್ರ ವಿಂಗಡಣೆಯ ಆಯೋಗವನ್ನು ನೇಮಕ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿಯನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ಷೇತ್ರಗಳ ವಿಂಗಡಣೆ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಗೃಹ ಸಚಿವಾಲಯ ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ಹಿರಿಯ ಭದ್ರತಾ ಅಧಿಕಾರಿಗಳೊಂದಿಗೆ ದೆಹಲಿಯ ಸಭೆಯಲ್ಲಿ ಈ ಕುರಿತು ಚರ್ಚೆ ಮಾಡಿದ್ದಾರೆ ಎಂದು ಮಾಧ್ಯಮ ವಿಭಾಗದಲ್ಲಿ ವರದಿಯಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ