ಬೆಂಗಳೂರು, ಜೂ.5- ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ದೇವೇಂದ್ರಪ್ಪ ಅವರು, ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆವೆನ್ ಮಿನಿಸ್ಟರ್ಸ್ ಕ್ವಾಟ್ರರ್ಸ್ಗೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ದೇವೇಂದ್ರಪ್ಪ ಅವರು ರಮೇಶ್ ಜಾರಕಿಹೊಳಿ ಅವರ ಸಂಬಂಧಿಕರಾಗಿದ್ದು, ಅವರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸಿ ಗೆಲುವಿಗೆ ಶ್ರಮಿಸಿದ್ದರು ಎನ್ನಲಾಗಿದೆ.
ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿರುವ ರಮೇಶ್ ಜಾರಕಿಹೊಳಿಯವರು ಸರ್ಕಾರದ ಅಸ್ಥಿರತೆ ಮುಂದಾಗಿದ್ದಾರೆ. ನಿನ್ನೆಯಷ್ಟೇ ಶಾಸಕ ಮಹೇಶ್ ಕುಮಟಳ್ಳಿಯವರು ರಮೇಶ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ರಮೇಶ್ ಜಾರಕಿಹೊಳಿಯವರು ಕಾಂಗ್ರೆಸ್ನ ಬಂಡಾಯ ಶಾಸಕರಾಗಿದ್ದು ಪಕ್ಷದ ನಾಯಕರ ನಡೆಯ ಬಗ್ಗೆ ಬೇಸರಗೊಂಡಿರುವ ಅವರ ಮುಂದಿನ ನಡೆ ಇನ್ನೂ ನಿಗೂಢವಾಗಿಯೇ ಇದೆ.