ಬೆಂಗಳೂರು: ಹಿರಿಯ ನಟಿ ಅಭಿನಯ ಶಾರದೆ ಜಯಂತಿಯವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆ, ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅಸ್ವಸ್ಥರಾಗಿದ್ದ ಜಯಂತಿಯವರಿಗೆ, ವೈದ್ಯರು ಐಸಿಯು ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ನಂತರ ಮಾತನಾಡಿದ ವೈದ್ಯರು ನಾಳೆಯವರೆಗೂ ಏನೂ ಹೇಳಲು ಆಗುವುದಿಲ್ಲ ಎಂದು ಹೇಳಿದರು.