ನವದೆಹಲಿ: ಲೋಕಸಭಾ ಚುನಾವಣೆಯನ್ನು ರದ್ದುಗೊಳಿಸಿ, ಬ್ಯಾಲೆಟ್ ಪೇಪರ್ ಮೂಲಕ ಮತ್ತೊಮ್ಮೆ ಚುನಾವಣೆಯನ್ನು ನಡೆಸುವಂತೆ ಒತ್ತಾಯಿಸಿ ವಕೀಲರೊಬ್ಬರು ಹೊಸದಾದ ಅರ್ಜಿಯೊಂದಿಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ವಕೀಲ ಎಂ.ಎಲ್ ಶರ್ಮಾ ಎಂಬುವವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ತಕ್ಷಣವೇ ವಿಚಾರಣೆಯನ್ನು ಕೈಗೆತ್ತಿಕೊಂಡು ಬ್ಯಾಲೆಟ್ ಪೇಪರ್ ಮೂಲಕ ಹೊಸದಾಗಿ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದ್ದಾರೆ.
ಜನ ಪ್ರತಿನಿಧಿ (Representation Of Peoples) ಕಾಯಿದೆಯಂತೆ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಬೇಕೆಂದು ತನ್ನ ಹಕ್ಕು ಮಂಡಿಸಿರುವ ವಕೀಲ ಎಂ.ಎಲ್.ಶರ್ಮಾ, ಇತ್ತೀಚೆಗೆ ನಡೆದ ಚುನಾವಣೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ. ಆದರೆ, ಕೋರ್ಟ್ ಈ ಅರ್ಜಿಯನ್ನು ಯಾವ ರೀತಿ ಪರಿಗಣಿಸಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.