ಬೆಂಗಳೂರು, ಜೂ.15- ನಗರದ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಮ್ ಅಲ್ಲಿನ ಅವ್ಯವಸ್ಥೆ ಕಂಡು ವೈದ್ಯರು ಮತ್ತು ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಇಂದು ಬೆಳಗ್ಗೆ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಸಚಿವರು ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾಮಂಡಲರಾಗಿ ಸಮಯಕ್ಕೆ ಸರಿಯಾಗಿ ಬಾರದ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಗರಂ ಆದರು.
ರೋಗಿಗಳು ವೈದ್ಯರಿಗಾಗಿ ಕಾಯುತ್ತಿದ್ದರೂ ಸಮಯಕ್ಕೆ ಸರಿಯಾಗಿ ವೈದ್ಯರು ಬಾರದೆ ಸಂಕಷ್ಟ ಎದುರಿಸುತ್ತಿರುವುದನ್ನು ಕಣ್ಣಾರೆ ಕಂಡ ಸಚಿವರು, ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು ಇನ್ನು ಮುಂದೆ ಇದೇ ರೀತಿ ನಡೆದುಕೊಂಡರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.