ನಾಳೆ ಕರ್ನಾಟಕ ರಕ್ಷಣಾ ಸೇನೆಯಿಂದ ಪ್ರತಿಭಟನೆ

ಬೆಂಗಳೂರು, ಜೂ.22-ಕರ್ನಾಟಕ ರಕ್ಷಣಾ ಸೇನೆ ವತಿಯಿಂದ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವ ನಕಲಿ ಕಂಪನಿಗಳ ವಿರುದ್ಧ ಮತ್ತು ಇಂತಹ ಕಂಪನಿಗಳಿಗೆ ಕುಮ್ಮಕ್ಕು ನೀಡುತ್ತಿರುವ ರಾಜಕಾರಣಿಗಳ ವಿರುದ್ಧ ನಾಳೆ ಬೆಳ್ಳಿಗೆ 11 ಗಂಟೆಗೆ ಟೌನ್‍ಹಾಲ್ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಸೇನೆಯ ರಾಜ್ಯಾಧ್ಯಕ್ಷ ಟಿ.ರಮೇಶ್‍ಗೌಡ ಮಾತನಾಡಿ ಇತ್ತೀಚಿಗೆ ಸಾರ್ವಜನಿಕರಿಗೆ ಮೋಸ ಮಾಡುವಂತಹ ಕಂಪನಿಗಳು ಹೆಚ್ಚಾಗಿವೆ.

ಜನರು ಅವುಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗುತ್ತಿದ್ದಾರೆ. ವಿಪರ್ಯಾಸದ ಸಂಗತಿ ಎಂದರೆ ಇಂತಹ ಕಂಪನಿಗಳಿಗೆ ಪ್ರಮುಖ ರಾಜಕಾರಣಿಗಳು ಕುಮ್ಮಕು ನೀಡುತ್ತಿದ್ದಾರೆ. ಆದ್ದರಿಂದ ಇಂತಹ ಕಂಪನಿಗಳು ಮತ್ತು ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ರಾಜಕಾರಣಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಸುಮಾರು 2 ಸಾವಿರ ಜನ ಹೋರಾಟದಲ್ಲಿ ಭಾಗವಹಿಸಲಿದ್ದು, ಐಎಂಎ ಕಂಪನಿ ಮತ್ತು ಇತರೆ ಯಾವುದೇ ಕಂಪನಿಯಿಂದ ಮೋಸ ಹೋಗಿರುವ ಜನರಿಗೆ ಹಣ ವಾಪಾಸ್ಸು ನೀಡಬೇಕು, ನಕಲಿ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸರ್ಕಾರ ಹಾಗು ನಗರ ಪೆÇಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು ಎಂದು ರಮೇಶ್‍ಗೌಡ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ