ಮುಂದಿನ ತಿಂಗಳು ಜೆಡಿಎಸ್ ಮಹಿಳಾ ಸಮಾವೇಶ-ಮಾಜಿ ಪಿಎಂ ದೇವೇಗೌಡ

ಬೆಂಗಳೂರು, ಜೂ.22- ಮುಂದಿನ ತಿಂಗಳು ಜೆಡಿಎಸ್ ಮಹಿಳಾ ಸಮಾವೇಶ ನಡೆಸುವುದಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಿಳಿಸಿದರು.

ಮಹಿಳಾ ಸಮಾವೇಶದ ಹಿನ್ನೆಲೆಯಲ್ಲಿ ಇಂದು ನಡೆದ ಮಹಿಳಾ ಘಟಕದ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಚರ್ಚೆ ನಡೆದಿದೆ.ಜೆಡಿಎಸ್ ಮಹಿಳಾ ಸಮಾವೇಶದ ದಿನದಂದು ಮಹಿಳಾ ಘಟಕದ ಅಧ್ಯಕ್ಷರ ಹೆಸರನ್ನು ಘೋಷಿಸುವುದಾಗಿ ತಿಳಿಸಿದರು.

ಜಿಲ್ಲಾ ಘಟಕಗಳನ್ನು ರಚನೆ ಮಾಡಿ ಅದರಲ್ಲಿ ಕಾರ್ಯಾಧ್ಯಕ್ಷರು, ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಿ. ನಿಮ್ಮ ಆಯ್ಕೆ ಯಾರು ಎಂಬುದನ್ನು ನೀವೇ ನಿರ್ಧರಿಸಿ ಎಂದು ಕರೆ ನೀಡಿದರು.

ಇಂದಿನಿಂದ ಹೊಸ ಅಧ್ಯಾಯ ಆರಂಭ ಮಾಡೋಣ. ಯಾರು ಮಾತನಾಡುತ್ತೀರೋ ಮಾತನಾಡಿ. ಎಲ್ಲವನ್ನೂ ಆಲಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಸಭೆಯಲ್ಲಿ ರೂತ್ ಮನೋರಮಾ, ಲೀಲಾದೇವಿ ಆರ್.ಪ್ರಸಾದ್ ಸೇರಿದಂತೆ ಮತ್ತಿತರ ಮಹಿಳಾ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ