ಟಿಡಿಪಿ ವಿರುದ್ಧ ಮುಂದುವರೆದ ಆಂದ್ರ ಸಿಎಂನ ಸೇಡಿನ ರಾಜಕಾರಣ

ಜಯವಾಡ, ಜೂ.24- ಚಂದ್ರಬಾಬು ನಾಯ್ಡು ನೇತೃತ್ವದ ತೆಲಗುದೇಶಂ ಪಾರ್ಟಿ(ಟಿಡಿಪಿ) ವಿರುದ್ಧ ಸೇಡಿನ ರಾಜಕಾರಣವನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮುಂದುವರೆಸಿದ್ದಾರೆ.

ಟಿಡಿಪಿ ಸರ್ಕಾರದ ಅವಧಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಪ್ರಜಾ ವೇದಿಕೆ ಕಟ್ಟಡವನ್ನು ಕೆಡವಲಾಗುವುದು ಎಂದು ಜಗನ್ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಸಿಎಂ ಆಗಿದ್ದ ವೇಳೆಯಲ್ಲಿ ಆಡಳಿತ ಸಂಬಂಧಿತ ಎಲ್ಲಾ ಕಾರ್ಯಗಳನ್ನು ಇದೇ ಕಟ್ಟಡದಲ್ಲಿ ನಡೆಯುತ್ತಿತ್ತು, ಆದರೆ ಈ ಕಟ್ಟಡ ಅನಧಿಕೃತವಾಗಿ ನಿರ್ಮಾಣವಾಗಿದ್ದು, ಬುಧವಾರ ಅದನ್ನು ದ್ವಂಸಗೊಳಿಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನಿಯಮಗಳನ್ನು ಗಾಳಿಗೆ ತೂರಿ ಕಟ್ಟಡ ನಿರ್ಮಿಸಲಾಗಿದೆ, ಸಿಎಂ ಆಗಿದ್ದ ಚಂದ್ರ ಬಾಬು ನಾಯ್ಡು, ನಿಯಮ ಗಾಳಿಗೆ ತೂರಿ ಕಟ್ಟಡ ಕಟ್ಟಲು ಅವಕಾಶ ಮಾಡಿಕೊಟ್ಟಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿಗಳೇ ನಿಯಮ ಉಲ್ಲಂಘಿಸಿದರೇ ಆಡಳಿತದಲ್ಲಿ ಭ್ರಷ್ಟಾಚಾರ ಎಷ್ಟಿರಬಹುದು ಎಂಬುದನ್ನು ಊಹಿಸಿಕೊಳ್ಳಿ ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ