ಬೆಂಗಳೂರು,ಜು.4- ವಿಧಾನಮಂಡಲದ ಅಧಿವೇಶನ ನಡೆಸಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಅದನ್ನು ಸ್ಪೀಕರ್ ಅವರ ಗಮನಕ್ಕೆ ತಂದಿದ್ದೇನೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಜೊತೆ ಸ್ಪೀಕರ್ ರಮೇಶ್ಕುಮಾರ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನಕ್ಕೆ ಸಂಬಂಧಪಟ್ಟಂತೆ ಚರ್ಚೆ ಮಾಡಲು ಸ್ಪೀಕರ್ ಅವರನ್ನು ಭೇಟಿ ಮಾಡಿದ್ದೇನೆ. ಉಳಿದಂತೆ ರಾಜಕೀಯದ ಕುರಿತು ನಾನು ಮಾತನಾಡಿಲ್ಲ ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಯನ್ನು ನಮ್ಮ ಪಕ್ಷದ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೀಡುತ್ತಾರೆ ಎಂದು ಹೇಳಿದರು.