ಬೆಂಗಳೂರು, ಜು.4- ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವ ಹಿನ್ನೆಲೆಯಲ್ಲಿ ಸಮನ್ವಯ ಸಮಿತಿಯಲ್ಲಿ ಜೆಡಿಎಸ್ನ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇದ್ದಾಗ ಮಾತ್ರ ಸಮನ್ವಯತೆ ಸಾಧಿಸಲು ಸಾಧ್ಯ ಎಂದು ಶಾಸಕ ಎಚ್.ವಿಶ್ವನಾಥ್ ಇಂದಿಲ್ಲಿ ಅಭಿಪ್ರಾಯಪಟ್ಟರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮನ್ವಯತೆ ಮತ್ತು ಸ್ವಾತಂತ್ರ್ಯೆವಿದ್ದರೆ ಪಕ್ಷ ಸಂಘಟನೆ ಸಾಧ್ಯ. ಜೆಡಿಎಸ್ ಜಾತ್ಯಾತೀತ ನಿಲುವು ಹೊಂದಿರುವ ಪಕ್ಷ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ನೊಂದಿಗೆ ಸರ್ಕಾರ ರಚಿಸಿದೆ. ಈ ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಲು ಸಮನ್ವಯತೆ ಅತ್ಯಗತ್ಯ ಎಂದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದು ಕರೆ ನೀಡಿದ ಅವರು, ಮಧುಬಂಗಾರಪ್ಪ ಅವರು, ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ ಚುನಾವಣೆಯಲ್ಲಿ ಮಾತ್ರ ಸೋತಿದ್ದಾರೆ. ಮುಂದೆ ಒಳ್ಳೆದಾಗುತ್ತದೆ. ನಿಖಿಲ್ ಕುಮಾರಸ್ವಾಮಿ ಸೋಲಿನಿಂದ ಎದೆಗುಂದಬಾರದು, ಪಕ್ಷ ನೀಡಿರುವ ಅವಕಾಶವನ್ನು ಬಳಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಮುಂದಾಗಲಿ ಎಂದು ಹೇಳಿದರು.
ಕರ್ನಾಟಕದಲ್ಲಿ ನೂತನ ಶಕೆ ಆರಂಭವಾಗಿದೆ.ಉತ್ತಮ ಪಕ್ಷ ಸಂಘಟನೆಯೊಂದಿಗೆ ಎಲ್ಲಾವರ್ಗಕ್ಕೂ ಸಮಾನ ಅವಕಾಶ ಕಲ್ಪಿಸುವಂತೆ ತಿಳಿಸಿದರು.
ಇಂದು ಅತ್ಯಂತ ಸಂತೋಷದಾಯಕ ದಿನ. ಒಂದು ವರ್ಷದ ಹಿಂದೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಜುಲೈ 4ರಂದು ತಾವು ಆಯ್ಕೆ ಆಗಿದ್ದೇವು ಇಂದು ಎಚ್.ಕೆ.ಕುಮಾರಸ್ವಾಮಿ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದೇನೆ. ಅವರು ಪಕ್ಷದಲ್ಲಿ ದುಡಿಯಲು ಸಜ್ಜಾಗಿದ್ದಾರೆ ಎಂದು ಹೇಳಿದರು.