ಬೆಂಗಳೂರು,ಜು.5-ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ನಿಂದ ಜನರ ನಿರೀಕ್ಷೆ ಬುಡಮೇಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ಖಂಡ್ರೆ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯೋಗಪತಿಗಳಿಗೆ ಸಹಕಾರ ನೀಡುವ ರೀತಿಯಲ್ಲಿ ಬಜೆಟ್ ಮಂಡಿಸಲಾಗಿದೆ. ಕಾರ್ಮಿಕರು, ಹಿಂದುಳಿದ ವರ್ಗದವರಿಗೆ ಅನುಕೂಲವಾಗುವಂತಹ ಆಯವ್ಯಯ ಮಂಡಿಸಿಲ್ಲ. ಕೇವಲ ಬಂಡವಾಳ ಶಾಹಿಗಳ ಪರವಾಗಿದೆ ಎಂದು ಹೇಳಿದರು.
ಬಜೆಟ್ನಲ್ಲಿರುವ ನ್ಯೂನ್ಯತೆಗಳ ಬಗ್ಗೆ ನಮ್ಮ ಸಂಸದರು ಹೋರಾಡಬೇಕಿದೆ. ಮೊದಲಿನಿಂದಲೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿಕೊಂಡೇ ಬರುತ್ತಿದೆ.
ರಾಜ್ಯಕ್ಕೆ ನೀಡಬೇಕಾದ ಅನುದಾನದ ವಿಚಾರದಲ್ಲಿ ತಾರತಮ್ಯವಾಗಿದೆ ಎಂದರು.