ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಹಿನ್ನಲೆ-ಹರ್ ಘರ್, ಹರ್ ಜಲ್ ನೂತನ ಯೋಜನೆ

ನವದೆಹಲಿ, ಜು.5-ದೇಶದ ಪ್ರತಿಯೊಬ್ಬ ನಾಗರಿಕನಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಹರ್ ಘರ್, ಹರ್ ಜಲ್ ಎಂಬ ನೂತನ ಯೋಜನೆಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.

ನೂತನ ಯೋಜನೆ ಪ್ರಕಾರ ಮುಂದಿನ 5 ವರ್ಷದೊಳಗೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ನೀರು ಪೂರೈಕೆ ಮಾಡಲು ಹರ್ ಘರ್, ಹರ್ ಜಲ್ ಯೋಜನೆ ಮುಂದಿನ ತಿಂಗಳಿನಿಂದಲೇ ದೇಶಾದ್ಯಂತ ಜಾರಿಯಾಗಲಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾಸೀತಾರಾಮನ್ ಲೋಕಸಭೆಯಲ್ಲಿಂದು ಪ್ರಕಟಿಸಿದರು.

ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಅವರು, ರಸ್ತೆ, ನೀರು ಮತ್ತು ವಿದ್ಯುತ್ ಪೂರೈಕೆ ಮಾಡುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಇದಕ್ಕಾಗಿ ಈ ಯೋಜನೆಯನ್ನು ಜಾರಿ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಈಗಾಗಲೇ ಕೆಲವು ಕಡೆ ಶುದ್ಧ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ದೇಶದ ರೈತರಿಗೆ ಸುರಕ್ಷಿತ ಮತ್ತು ಸಾಕಷ್ಟು ನೀರು ದೊರಕಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿ. ಈ ನಿಟ್ಟಿನಲ್ಲಿ ಅದರತ್ತ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ