ಬೆಂಗಳೂರು, ಮಾ 28-ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಭರವಸೆಗಳನ್ನು ಈಡೇರಿಸದೆ ಕೇವಲ ಭ್ರಮಾಲೋಕ ಸೃಷ್ಟಿಸಿದ್ದಾರೆ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ.
ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಏರ್ಪಡಿಸಿದ್ದ ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ, ವಿದೇಶದಲ್ಲಿರುವ ಕಪ್ಪು ಹಣ ತರುವುದು ಸೇರಿದಂತೆ ಅನೇಕ ಭರವಸೆಗಳನ್ನು ನೀಡಿ ಯಾವುದೇ ಭರವಸೆಗಳನ್ನು ಈಡೇರಿಸದಿರುವ ಅವರು ಮಹಾನ್ ಸುಳ್ಳುಗಾರ ಎಂದು ಆರೋಪಿಸಿದ್ದಾರೆ.
ರೈತರನ್ನು ಕಡೆಗಣಿಸಿ ಕಾಪೆರ್Çೀರೇಟ್ ಸಂಸ್ಥೆಗಳನ್ನು ಮಾತ್ರ ಪೆÇೀಷಿಸುತ್ತಿದ್ದಾರೆ. ಉದ್ಯಮಿಗಳ ಸಾಲ ಮನ್ನಾ ಮಾಡುವ ಅವರು, ಕೃಷಿಕರ ಸಾಲ ಮನ್ನಾ ಮಾಡಲು ಮೀನಾಮೇಷ ಎಣಿಸುತ್ತಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಬಂದಿದೆ. ಉತ್ತರಪ್ರದೇಶ, ಮಧ್ಯಪ್ರದೇಶದಲ್ಲಿ ನಕಲಿ ಎನ್ಕೌಂಟರ್ಗಳ ಮೂಲಕ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಕೇಂದ್ರ ಸರ್ಕಾರ ಕೋಮುವಾದಿ ನಿಲುವಿನಿಂದ ಆತಂಕದ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ನುಡಿದಂತೆ ನಡೆಯುತ್ತಿದೆ. ಇಲ್ಲಿ ರಾಜ್ಯಕ್ಕೆ ಬಿಜೆಪಿ ಪಕ್ಷದ ನೆಲೆಯಿಲ್ಲ. ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ. ಪಕ್ಷ ಜಯಗಳಿಸಲು ಕಾರ್ಯಕರ್ತರು ಒಗ್ಗಟ್ಟಾಗಿ ಹಗಲಿರುಳು ಶ್ರಮಿಸಬೇಕೆಂದು ಹೇಳಿದರು.
ಮುಖಂಡರಾದ ಮಂಜುಳಾ ನಾಯ್ಡು, ನಾರಾಯಣಸ್ವಾಮಿ, ರಾಜಣ್ಣ, ಕೃಷ್ಣಮೂರ್ತಿ, ಎಸ್.ಮನೋಹರ್, ಸುಧಾಕರ್ ಮತ್ತಿತರರು ಈ ಸಂದರ್ಭದಲ್ಲಿದ್ದರು.