ಬೆಂಗಳೂರು, ಜು.9-ಗ್ರಾಮಸ್ಥರಲ್ಲಿ ಆತಂಕವನ್ನುಂಟುಮಾಡಿದ್ದ ಚಿರತೆಯೊಂದು ಬೋನಿನಲ್ಲಿ ಸೆರೆಯಾಗಿದೆ.
ಎಚ್ಡಿ ಕೋಟೆ ತಾಲೂಕಿನ ಕಾಡಹಂಪಾಪುರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಬಿದ್ದಿದೆ.
ಚಿರತೆ ಗ್ರಾಮಕ್ಕೆ ನುಗ್ಗಿ ಮೇಕೆಗಳನ್ನು ತಿಂದು ತೇಗುತ್ತಿತ್ತು. ಇದರಿಂದ ಆತಂಕಗೊಂಡಿದ್ದ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ಇಪ್ಪತ್ತು ದಿನಗಳ ಹಿಂದೆ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಹಂಪಾಪುರದ ಜಮೀನೊಂದರಲ್ಲಿ ಬೋನು ಇರಿಸಿದ್ದರು.
ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಸಿಕ್ಕ ಬೋನಿನೊಂದಿಗೆ ತೆಗೆದುಕೊಂಡು ಬೇರೊಂದು ಅರಣ್ಯಕ್ಕೆ ಬಿಟ್ಟಿದ್ದಾರೆ.
ಒಟ್ಟಾರೆ ಪ್ರತಿನಿತ್ಯ ಕಾಣಿಸಿಕೊಳ್ಳುತ್ತಿದ್ದ ಚಿರತೆ ಸೆರೆಸಿಕ್ಕಿದ್ದರಿಂದ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.