ಬೆಂಗಳೂರು, ಜು.10- ಬಿಜೆಪಿಯವರಿಗೆ ಕುಮಾರಸ್ವಾಮಿ ಅವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್-ಕಾಂಗ್ರೆಸ್ನ ಶಾಸಕರನ್ನು ವಿವಿಧ ಆಮಿಷಗಳ ಮೂಲಕ ಕರೆದುಕೊಂಡು ಹೋಗಿ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿರುವ ಬಿಜೆಪಿಯವರು ತಾವೇ ಮುಂದಾಗಿ ಪ್ರತಿಭಟನೆ ನಡೆಸುತ್ತಿರುವುದು, ಸುಪ್ರೀಂಕೋರ್ಟ್ ಮೊರೆ ಹೋಗಿರುವುದು ಹಾಸ್ಯಾಸ್ಪದ. ಈಗಾಗಲೇ ಐದು ಬಾರಿ ಆಪರೇಷನ್ ಕಮಲಕ್ಕೆ ಕೈ ಹಾಕಿ ಸುಟ್ಟುಕೊಂಡಿರುವ ಬಿಜೆಪಿಯವರು ಆರನೇ ಬಾರಿ ಪ್ರಯತ್ನ ಮಾಡಿದ್ದಾರೆ. ಈ ಬಾರಿ ಅವರು ವಿಫಲರಾದರೆ ಬಿಜೆಪಿ ಸಂಪೂರ್ಣ ಭಸ್ಮವಾಗುತ್ತದೆ ಎಂದು ಭವಿಷ್ಯ ನುಡಿದರು.