ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದ ಪ್ರತಿಭಟನೆ

ಬೆಂಗಳೂರು, ಜು.10- ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ-ಯುಕೆಜಿ ಪ್ರಾರಂಭಿಸುವುದು ಹಾಗೂ ಬಾಕಿ ಇರುವ ಗೌರವಧನ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಟಿ. ಲೀಲಾವತಿ ಒತ್ತಾಯಿಸಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಪ್ರತಿಭಟನೆ ನಡೆಸಿತು.

ಈ ವೇಳೆ ಮಾತನಾಡಿದ ಲೀಲಾವತಿ ಇತ್ತೀಚೆಗೆ ಎಲ್‍ಕೆಜಿ-ಯುಕೆಜಿಯನ್ನು ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲು ಆದೇಶ ನೀಡಲಾಗಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ-ಯುಕೆಜಿ ಪ್ರಾರಂಭವಾದರೆ 3ರಿಂದ 6ವರ್ಷದೊಳಗಿನ ಮಕ್ಕಳು ಹೋಗುತ್ತಾರೆ. ಅಂಗನವಾಡಿಯಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತದೆ. ಆದ್ದರಿಂದ ಎಲ್‍ಕೆಜಿ-ಯುಕೆಜಿಯನ್ನು ಅಂಗನವಾಡಿಯಲ್ಲಿಯೇ ಪ್ರಾರಂಭಿಸಬೇಕು. ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿರುವ ಕೆಲವು ಕಾರ್ಯಕರ್ತೆಯರು ಪದವಿಯನ್ನು ಪಡೆದಿದ್ದು ಮಕ್ಕಳಿಗೆ ಬೇಕಾದ ಶಿಕ್ಷಣ ಕೊಡುವ ಸಾಮಥ್ರ್ಯವನ್ನು ಹೊಂದಿದ್ದಾರೆ. ಆದ್ದರಿಂದ ಅಂಗನವಾಡಿಯಲ್ಲಿಯೇ ಎಲ್‍ಕೆಜಿ-ಯುಕೆಜಿ ಪ್ರಾರಂಭಿಸಬೇಕು ಎಂದರು.

ಬೆಂಗಳೂರಿನ ದೊಡ್ಡಬಳ್ಳಾಪುರ, ಆನೇಕಲ್ಲು, ಉತ್ತರ ತಾಲೂಕು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ 3-4 ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆರಿಗೆ ಗೌರವಧನ ನೀಡಿಲ್ಲ ಹಾಗೂ ಕೋಳಿ ಮೊಟ್ಟೆ, ತರಕಾರಿ, ಹಣ್ಣು , ಸರಿಯಾದ ಗ್ಯಾಸ್ ವಿತರಣೆ ಸಹ ಮಾಡಿಲ್ಲ ಎಂದರು.

2016-ಏಪ್ರಿಲ್‍ರಿಂದ ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂ ಗೊಳಿಸಬೇಕು.5ವರ್ಷ ಪೂರೈಸಿದ ಮೇಲ್ವಿಚಾರಕಿಯನ್ನು ಕಡ್ಡಾಯವಾಗಿ ವರ್ಗಾವಣೆ ಮಾಡಬೇಕು.ಖಾಲಿ ಇರುವ ಸಹಾಯಕಿ, ಕಾರ್ಯಕರ್ತೆರ ಹುದ್ದೆಗೆ ಭರ್ತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ