ಶಾಸಕಿ ಅಂಜಲಿ ನಿಂಬಾಳ್ಕರ್ ರಾಜೀನಾಮೆ ನಿರ್ಧಾರ-ಹಿಂದೆ ಸರಿಯದ ಕಾರಣ, ಆಕೆಯ ಪತಿಯನ್ನು ಟಾರ್ಗೆಟ್ ಮಾಡಿದ ಸರ್ಕಾರ

Varta Mitra News

ಬೆಂಗಳೂರು,ಜು.11-ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿಯದ ಕಾರಣ ದೋಸ್ತಿ ಸರ್ಕಾರ, ಆಕೆಯ ಪತಿಯನ್ನು ಟಾರ್ಗೆಟ್ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಆರ್ಥಿಕ ಅಪರಾಧಗಳ ವಿಭಾಗದ ಪೆÇಲೀಸ್ ಮಹಾನಿರೀಕ್ಷಕರಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ಭ್ರಷ್ಟಾಚಾರ ನಿಗ್ರಹ ದಳ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಭ್ರಷ್ಟಾಚಾರ ನಿಗ್ರಹ ದಳ ಐಜಿಪಿಯಾಗಿದ್ದ ಎಂ.ಚಂದ್ರಶೇಖರ್ ಅವರನ್ನು ಸಿಐಡಿ, ಆರ್ಥಿಕ ಅಪರಾಧಗಳ ವಿಭಾಗದ ಪೆÇಲೀಸ್ ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.
ರಾಜಿನಾಮೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಅಂಜಲಿ ನಿಂಬಾಳ್ಕರ್ ಮೇಲೆ ಒತ್ತಡ ಹೇರುತ್ತಿದೆ. ಆದರೆ ಅಂಜಲಿ ಇದಕ್ಕೆ ಸೊಪ್ಪು ಹಾಕುತ್ತಿಲ್ಲ, ಹೀಗಾಗಿ ತಮ್ಮ ಐಪಿಎಸ್ ಪತಿಯನ್ನು ಸರ್ಕಾರ ಟಾರ್ಗೆಟ್ ಮಾಡುವ ಆತಂಕ ವ್ಯಕ್ತ ಪಡಿಸಿದ್ದಾರೆ.

2 ದಿನಗಳ ಹಿಂದೆಯೇ ರಾಜಿನಾಮೆ ನೀಡಲು ಅಂಜಲಿ ನಿರ್ಧರಿಸಿದ್ದರು, ಆದರೆ ಸಮ್ಮಿಶ್ರ ಸರ್ಕಾರದ ಮುಖಂಡರು ರಾಜಿನಾಮೆ ನೀಡುವುದನ್ನು ತಡೆ ಹಿಡಿದಿದ್ದರು, ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಲು ಅಂಜಲಿ ನಿರ್ಧರಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹಲವು ನಾಯಕರು ಆಕೆ ಮತ್ತು ಪತಿಯ ಮೇಲೆ ಒತ್ತಡ ಹೇರುತ್ತಿರುವುದಾಗಿ ತಿಳಿದು ಬಂದಿದೆ.ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ. ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅಂಜಲಿ ನಿಂಬಾಳ್ಕರ್ ರಾಜಿನಾಮೆ ನೀಡುವ ಸೂಚನೆ ನೀಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ