ಪಕ್ಷೇತರ ಶಾಸಕರಿಂದ ಪ್ರತ್ಯೇಕ ಆಸನ ವ್ಯವಸ್ಥೆಗೆ ಮನವಿ

ಬೆಂಗಳೂರು, ಜು.13-ಕಲಾಪದ ವೇಳೆ ವಿಧಾನಸಭೆಯಲ್ಲಿ ನಮಗೆ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಬೇಕೆಂದು ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ನಾಗೇಶ್ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಆಡಳಿತ ಪಕ್ಷಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದೇವೆ. ಈ ಸಂಬಂಧ ರಾಜ್ಯಪಾಲರಿಗೂ ಪತ್ರ ಕೊಟ್ಟಿದ್ದೇವೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ವಿಧಾನಮಂಡಲದ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ನಮಗೆ ಪ್ರತ್ಯೇಕವಾದ ಆಸನದ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಪ್ರತಿಪಕ್ಷದವರ ಕಡೆ ನಮಗೂ ಆಸನದ ವ್ಯವಸ್ಥೆಯನ್ನು ಮಾಡಬೇಕು. ನಾವು ಆಡಳಿತ ಪಕ್ಷಕ್ಕೆ ನೀಡಿದ ಬೆಂಬಲವನ್ನು ವಾಪಸ್ ಪಡೆದಿದ್ದೇವೆ ಎಂದು ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್ ಶಂಕರ್ ಹಾಗೂ ನಾಗೇಶ್ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.

ಇತ್ತೀಚೆಗೆ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿದ್ದ ನಾಗೇಶ್ ಮತ್ತು ಶಂಕರ್ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದರು. ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತಾವು ಬಿಜೆಪಿಗೆ ಬೆಂಬಲ ನೀಡುವುದಾಗಿ ರಾಜ್ಯಪಾಲರಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಇದರ ಜೊತೆ ಬಿಎಸ್‍ಪಿ ಶಾಸಕ ಎನ್.ಮಹೇಶ್ ಕೂಡ ಕಲಾಪದಲ್ಲಿ ತಮಗೂ ಪ್ರತ್ಯೇಕ ಆಸನ ನೀಡುವಂತೆ ಸ್ಪೀಕರ್‍ಗೆ ಅರಿಕೆ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ