ಬೆಂಗಳೂರು,ಜು.15-ಆಡಳಿತ ಪಕ್ಷದ ಶಾಸಕರು, ಸಚಿವರೊಂದಿಗೆ ಆತ್ಮೀಯವಾಗಿ ಮಾತನಾಡಿಸುತ್ತ ಮೈತ್ರಿ ಸರ್ಕಾರಕ್ಕೆ ಏನು ಆಗುವುದಿಲ್ಲ, ಧೈರ್ಯವಾಗಿರಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಯ ನೀಡಿದರು.
ವಿಧಾನಸಭೆಯ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ವಿಧಾನಸಭೆಯ ಆಡಳಿತ ಪಕ್ಷದ ಮೊಗಸಾಲೆಗೆ ಆಗಮಿಸಿದ ಮುಖ್ಯಮಂತ್ರಿ, ಕಾಂಗ್ರೆಸ್-ಜೆಡಿಎಸ್‍ನ ಸಚಿವರು ಶಾಸಕರೊಂದಿಗೆ ಔಪಚಾರಿಕವಾಗಿ ಮಾತನಾಡಿ, ಸರ್ಕಾರಕ್ಕೆ ತೊಂದರೆಯಾಗುವುದಿಲ್ಲ ಧೈರ್ಯವಾಗಿರಿ ಎಂದು ಭರವಸೆ ನೀಡಿದರು.
ಮೊಗಸಾಲೆಯಲ್ಲಿ ಸಚಿವರು, ಶಾಸಕರೊಂದಿಗೆ ಆತ್ಮೀಯವಾಗಿ ಮಾತನಾಡಿ, ಸರ್ಕಾರ ಸುಭದ್ರವಾಗಲಿದೆ ಎಂಬ ವಿಶ್ವಾಸ ಮೂಡಿಸುವ ಪ್ರಯತ್ನ ಮಾಡಿದರು.