ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ

ಬೆಂಗಳೂರು, ಜು.17-ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟವಾದ ಮಧ್ಯಂತರ ಆದೇಶವನ್ನು ನೀಡಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯ ಗೊಂದಲಗಳಿಗೆ ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ಸ್ಪಷ್ಟವಾದ ಪರಿಹಾರ ದೊರೆತಂತಾಗಿದೆ.ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಲಾಗುವುದು ಎಂದರು.

ಶಾಸಕರು ನೀಡಿರುವ ರಾಜೀನಾಮೆ ವಿಚಾರದಲ್ಲಿ ಸಭಾಧ್ಯಕ್ಷರು ವಿಳಂಬ ಮಾಡದೆ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜೀನಾಮೆ ನೀಡಿರುವ ಶಾಸಕರಿಗೆ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಒತ್ತಾಯ ಮಾಡುವಂತಿಲ್ಲ ಎಂದು ಹೇಳಿರುವುದು ಅವರಿಗೆ ರಿಲೀಫ್ ಸಿಕ್ಕಂತಾಗಿದೆ. ಅಧಿವೇಶನದಲ್ಲಿ ಪಾಲ್ಗೊಳ್ಳುವುದು ಅಥವಾ ಪಾಲ್ಗೊಳ್ಳದಿರುವುದು ಶಾಸಕರಿಗೆ ಸೇರಿದ್ದು ಎಂದರು.

ನಾಳೆ ವಿಧಾನಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿಯವರ ವಿಶ್ವಾಸಮತಯಾಚನೆ ವಿಚಾರ ಪ್ರಸ್ತಾಪವಾಗಲಿದೆ. ಆ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ತಾವು ಕೋರುವ ವಿಶ್ವಾಸಮತಯಾಚನೆಗೆ ಸಂಬಂಧಿಸಿದಂತೆ ಅನಿಸಿಕೆಯನ್ನು ವ್ಯಕ್ತಪಡಿಸಬಹುದಾಗಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ