ಬೆಂಗಳೂರು, ಜು.17 -ಶಾಸಕರ ರಾಜೀನಾಮೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಸಂಕಷ್ಟಕ್ಕೀಡಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಕೂಡ ದೇವರ ಮೊರೆ ಹೋಗಿದ್ದರು.
ಇಂದು ಬೆಳಗ್ಗೆ ಶಂಕರಪುರದಲ್ಲಿರುವ ಶಂಕರ ಮಠಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಅವರು ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಕೂಡ ಹಾಜರಿದ್ದರು. ನಿನ್ನೆ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ತ್ಯಾಗರಾಜನಗರದಲ್ಲಿರುವ ದತ್ತಾತ್ರೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಿದ್ದರು.