ಪಿಎಂಜಿಎಸ್‍ವೈ ಅಡಿ ದೇಶಾದ್ಯಂತ 1.25 ಲಕ್ಷ ಕಿ.ಮೀ. ರಸ್ತೆ ನಿರ್ಮಾಣ

ನವದೆಹಲಿ, ಜು.17– ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆ (ಪಿಎಂಜಿಎಸ್‍ವೈ) ಅಡಿ ದೇಶಾದ್ಯಂತ 1.25 ಲಕ್ಷ ಕಿ.ಮೀ. ಗ್ರಾಮೀಣ ರಸ್ತೆಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.

ಗ್ರಾಮೀಣಾಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಅನುದಾನ ಬೇಡಿಕೆ ಕುರಿತ ಚರ್ಚೆಯಲ್ಲಿ ಮಾತನಾಡಿದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ನರೇಂದ್ರಸಿಂಗ್ ಥೋಮರ್ 80,000 ಕೋಟಿ ರೂ. ವೆಚ್ಚದಲ್ಲಿ ಪಿಎಂಜಿಎಸ್‍ವೈ ಅಡಿ ಗ್ರಾಮೀಣ ರಸ್ತೆಗಳು ನಿರ್ಮಾಣವಾಗಲಿವೆ ಎಂದರು.

2024-25ರೊಳಗೆ ದೇಶದ ವಿವಿಧೆಡೆ 1,25,000 ಕಿ.ಮೀ. ಗ್ರಾಮೀಣ ರಸ್ತೆಗಳು ನಿರ್ಮಾಣವಾಗಲಿವೆ ಎಂದು ಮಾಹಿತಿ ನೀಡಿದರು.

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಕೇಂದ್ರ ಸರ್ಕಾರ ಪ್ರಥಮ ಆದ್ಯತೆ ನೀಡುತ್ತಿದೆ. ಪಿಎಂಜಿಎಸ್‍ವೈ ಯೋಜನೆಗಾಗಿ ಪ್ರತಿ ವರ್ಷ ಅನುದಾನವನ್ನು ಹೆಚ್ಚಿಸಲಾಗುತ್ತಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ