ಗಂಗಾವತಿ: ಐತಿಹಾಸಿಕ ಪ್ರಸಿದ್ಧ ನವಬೃಂದಾವನವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ

ಗಂಗಾವತಿ: ಐತಿಹಾಸಿಕ ಪ್ರಸಿದ್ಧ ನವಬೃಂದಾವನವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ನಿಧಿಯಾಸೆಗಾಗಿ ರಾತ್ರೋರಾತ್ರಿ ಬೃಂದಾವನವನ್ನು ಹಾಳುಮಾಡಿದ್ದಾರೆ.

ಕೊಪ್ಪಳ ಜಿಲ್ಲೆಯ ಆನೆಗೊಂದಿ ಗ್ರಾಮದಲ್ಲಿ ವ್ಯಾಸರಾಯರ ಬೃಂದಾವನ ಸೇರಿ ಒಟ್ಟು ಒಂಭತ್ತು ಮಧ್ವ ಸಂತರ ಬೃಂದಾವನಗಳು ಇವೆ. ಈ ನವಬೃಂದಾವನವನ್ನು ತುಂಗಭದ್ರಾ ನದಿ ಸುತ್ತುವರಿದಿದೆ. ಹಂಪಿಯಿಂದ ಸುಮಾರು 20 ಕಿಮೀ ದೂರದಲ್ಲಿರುವ ನವಬೃಂದಾವನದಲ್ಲಿ ರಾತ್ರೋರಾತ್ರಿ ಕಂಬಗಳನ್ನು ಕಿತ್ತು ಹಾಕಲಾಗಿದೆ. ಆಳವಾದ ಗುಂಡಿಗಳನ್ನೂ ತೋಡಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ