ಬೆಂಗಳೂರು, ಜು.20-ಅತೃಪ್ತರ ಮನವೊಲಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅತೃಪ್ತರು ನನ್ನ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಹೇಳಿದರು.
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಟಿ.ಸೋಮಶೇಖರ್, ಭೆರತಿ ಬಸವರಾಜ್, ಮುನಿರತ್ನ ಸೇರಿದಂತೆ ಎಲ್ಲರೂ ಒಟ್ಟಾಗಿಯೇ ಹೋಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆವು.
ಹಿರಿಯ ನಾಯಕರ ಒತ್ತಡಕ್ಕೆ ಮಣಿದು ನಾನು ರಾಜೀನಾಮೆ ವಾಪಸ್ ಪಡೆದಿದ್ದೇನೆ. ನಾವೆಲ್ಲ ಒಟ್ಟಾಗಿ ಕುಳಿತು ರಾಜೀನಾಮೆ ನೀಡುವುದರ ಬಗ್ಗೆ ಚರ್ಚಿಸಿದ್ದೆವು.ಈ ಬಗ್ಗೆ ಎಸ್.ಟಿ.ಸೋಮಶೇಖರ್ ಹೇಳಿರುವುದು ಎಲ್ಲ ಸತ್ಯ. ಎಂ.ಟಿ.ಬಿ.ನಾಗರಾಜ್ ಅವರು ಹೇಳಿರುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ವಿಶ್ವನಾಥ್ ಅವರನ್ನು ಒಂದು ಬಾರಿ ಭೇಟಿಯಾಗಿದ್ದೆ ಅಷ್ಟೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.
ನನಗೆ ಡಿಸಿಎಂ ಮಾಡುವ ಆಫರ್ ನೀಡಿದ್ದಾರೆ ಎಂಬುದು ಊಹಾಪೆÇೀಹ.ಅಂತಹ ಯಾವುದೇ ಬೇಡಿಕೆ ಇಟ್ಟಿಲ್ಲ, ಆಸೆಯೂ ಇಲ್ಲ ಎಂದು ತಿಳಿಸಿದರು.
ಇಂದು ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಮಾಡಿದ ಸಂದರ್ಭದಲ್ಲಿ ಅತೃಪ್ತರ ಮನವೊಲಿಕೆ ಸಂಬಂಧ ಯಾವುದೇ ಚರ್ಚೆ ನಡೆಸಿಲ್ಲ, ದೇವೇಗೌಡರ ಭೇಟಿ ಸೌಜನ್ಯದ ಭೇಟಿ.ಇದರ ಬಗ್ಗೆ ಯಾವುದೇ ಅರ್ಥ ಕಲ್ಪಿಸುವುದು ಬೇಡ ಎಂದು ಸ್ಪಷ್ಟಪಡಿಸಿದರು.