ಅಭಿವೃದ್ಧಿ ಕೆಲಸಗಳಿಗಾಗಿ ಜನತೆ ಇನ್ನೆಷ್ಟು ದಿನ ಕಾಯಬೇಕು

ಬೆಂಗಳೂರು, ಆ.2- ಆರ್‍ಎಸ್‍ಎಸ್ ಮತ್ತು ಬಿಜೆಪಿ ಅಧಿಕಾರ ಹಂಚಿಕೆ ಕಿತ್ತಾಟದಿಂದ ಮಂತ್ರಿ ಮಂಡಲ ರಚನೆಯಾಗಿಲ್ಲ ಎಂದು ಆರೋಪಿಸಿರುವ ಕೆಪಿಸಿಸಿ, ಅಭಿವೃದ್ಧಿ ಕೆಲಸಗಳಿಗಾಗಿ ಜನತೆ ಇನ್ನು ಎಷ್ಟು ದಿನ ಕಾಯಬೇಕು ಎಂದು ಪ್ರಶ್ನಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಪಕ್ಷ ಹಿಂಬಾಗಿಲ ಸಿಎಂ ಯಡಿಯೂರಪ್ಪ ಅವರೇ ಎಲ್ಲಿ ನಿಮ್ಮ ಸಚಿವ ಸಂಪುಟ ಎಂದು ಪ್ರಶ್ನಿಸಿದೆ. ಆರ್‍ಎಸ್‍ಎಸ್ ಮತ್ತು ಬಿಜೆಪಿಯ ಅಧಿಕಾರ ಹಂಚಿಕೆ ಕಿತ್ತಾಟದಿಂದ ರಾಜ್ಯದ ಜನತೆಗೆ ಏಕೆ ತೊಂದರೆ ಕೊಡುತ್ತಿದ್ದೀರಾ, ಆಡಳಿತಯಂತ್ರವನ್ನು ಸ್ಥಗಿತಗೊಳಿಸಿರುವುದಕ್ಕೆ ಕಿಡಿಕಾರಿದೆ.

ರಾಜ್ಯದ ಜನ ಮಂತ್ರಿಗಳಿಗಾಗಿ ಅಭಿವೃದ್ಧಿ ಕಾರ್ಯಗಳಿಗಾಗಿ ಇನ್ನು ಎಷ್ಟು ದಿನ ಕಾಯಬೇಕು ಎಂದು ಕೇಳುವ ಮೂಲಕ ಯಡಿಯೂರಪ್ಪ ಅವರಿಗೆ ಟ್ಯಾಗ್ ಮಾಡಲಾಗಿದೆ.

ಈ ಹಿಂದೆ ಸಮ್ಮಿಶ್ರ ಸರ್ಕಾರ ಪತನ ಹೊಂದುವ ಹಂತದಲ್ಲಿ ವಿಶ್ವಾಸಮತಯಾಚನೆ ಎರಡು ದಿನ ತಡವಾದಗ ಕೆಂಡಾಮಂಡಲವಾಗಿದ್ದ ಯಡಿಯೂರಪ್ಪನವರು, ಸರ್ಕಾರ ನಿಷ್ಕ್ರಿಯವಾಗಿದೆ. ಬಹುಮತ ಕಳೆದುಕೊಂಡಿರುವ ಕುಮಾರಸ್ವಾಮಿ ಅವರು ರಾಜೀನಾಮೆ ಕೊಟ್ಟುಹೋದರೆ ಬಹುಮತ ಇರುವ ಸರ್ಕಾರ ಆಡಳಿತಕ್ಕೆ ಬಂದು ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಕೆಂಡಾಮಂಡಲವಾಗಿದ್ದರು.

ಆ ನಂತರ ರಾಜಕೀಯ ಬೆಳವಣಿಗೆಯಲ್ಲಿ ಸಮ್ಮಿಶ್ರ ಸರ್ಕಾರ ಪತನವಾಯಿತು. ಬಿ.ಎಸ್.ಯಡಿಯೂರಪ್ಪನವರು ಜು.26ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಆದರೆ ಇವರೆಗೂ ಅವರ ಸಂಪುಟಕ್ಕೆ ಒಬ್ಬರೂ ಕೂಡ ಸಚಿವರಾಗಿ ಸೇರ್ಪಡೆಯಾಗಿಲ್ಲ.

ಒಂದು ವಾರ ಕಳೆದರೂ ಸಂಪುಟ ರಚನೆ ಮಾಡದಿರುವುದನ್ನು ಕಾಂಗ್ರೆಸ್ ಪ್ರಶ್ನಿಸಲಾರಂಭಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ