ಬೆಂಗಳೂರು, ಆ.2- ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಎರಡು ವಾರಗಳಿಂದ ತಮ್ಮ ವಶದಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಿನ್ನೆ ಮನ್ಸೂರ್ ಖಾನ್ನನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದರು.
ಅಕ್ಯೂಟ್ ಕೋರೋನರಿ ಸಿಂಡ್ರೋಂ ಕಾಯಿಲೆಯಿಂದ ಬಳಲುತ್ತಿರುವ ಮನ್ಸೂರ್ ಖಾನ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕೆಂದು ವಕೀಲರು ವಾದಿಸಿದ್ದರು.
ಇದಕ್ಕೆ ವಿರೋಧ ವ್ಯಕ್ತಪಡಿಸಿದ ಎಸ್ಐಟಿ ಅಧಿಕಾರಿಗಳ ವಾದವನ್ನು ಪುರಸ್ಕರಿಸಿರುವ ನ್ಯಾಯಾಲಯ ಜಯದೇವದಲ್ಲಿ ಚಿಕಿತ್ಸೆ ಕೊಡಿಸಲು ಸಮ್ಮತಿಸಿದೆ. ಹಾಗಾಗಿ ನಿನ್ನೆ ರಾತ್ರಿ ಮನ್ಸೂರ್ ಖಾನ್ನನ್ನು ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.