ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಎಂ.ಕೆ.ಶ್ರೀರಂಗಯ್ಯ

ಬೆಂಗಳೂರು, ಆ.3- ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳ ನಿಯೋಜನೆ ಇಂದೂ ಕೂಡ ಮುಂದುವರೆದಿದ್ದು, ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯನ್ನಾಗಿ ಐಎಎಸ್ ಅಧಿಕಾರಿ ಎಂ.ಕೆ.ಶ್ರೀರಂಗಯ್ಯ ಅವರನ್ನು ನೇಮಿಸಲಾಗಿದೆ.

ಇಂದು ಮೂವರು ಅಧಿಕಾರಿಗಳನ್ನು ಮುಖ್ಯಮಂತ್ರಿ ಸಚಿವಾಲಯಕ್ಕೆ ನೇಮಿಸಿ ಆದೇಶ ಜಾರಿಯಾಗಿದೆ.

ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿಯನ್ನಾಗಿ ವಾರ್ತಾ ಇಲಾಖೆಯ ನಿರ್ದೇಶಕ ಎನ್.ಬೃಂಗೇಶ್ ಅವರನ್ನು ನೇಮಿಸಲಾಗಿದ್ದು, ವಾರ್ತಾ ಇಲಾಖೆಯ ಪ್ರಭಾರ ಜವಾಬ್ದಾರಿಯನ್ನು ಏಕಕಾಲಕ್ಕೆ ನಿಭಾಯಿಸುವಂತೆ ಸೂಚನೆ ನೀಡಲಾಗಿದೆ.

ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಯ ಉಪ ಕಾರ್ಯದರ್ಶಿಯಾಗಿದ್ದ ಎ.ಆರ್.ರವಿ ಅವರನ್ನು ಮುಖ್ಯಮಂತ್ರಿಯವರ ಉಪ ಕಾರ್ಯದರ್ಶಿ ಸ್ಥಾನಕ್ಕೆ ನೇಮಿಸಲಾಗಿದೆ.

ಎಂ.ಕೆ.ಶ್ರೀರಂಗಯ್ಯ ಅವರು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿಯಾಗಿ ಶಿವಮೊಗ್ಗದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬೃಂಗೇಶ್ ಅವರು ಈ ಮೊದಲು ಯಡಿಯೂರಪ್ಪ ಉಪ ಮುಖ್ಯಮಂತ್ರಿಯಾಗಿದ್ದ ಕಾಲದಿಂದಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.

ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ವಾರ್ತಾ ಇಲಾಖೆಯ ನಿರ್ದೇಶಕರಾಗಿ ನೇಮಕವಾಗಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ