ಪಕ್ಷ ತೆಗೆದುಕೊಳ್ಳುವ ತಿರ್ಮಾನಕ್ಕೆ ಬದ್ಧ-ಬಿ.ವೈ.ವಿಜಯೇಂದ್ರ

ಬೆಂಗಳೂರು, ಆ.3- ಪಕ್ಷ ವಹಿಸುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸಲು ಸಿದ್ದ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳುವ ಮೂಲಕ ಉಪಚುನಾವಣೆಗೆ ಸ್ಪರ್ಧಿಸಲು ಸಿದ್ದ ಎಂಬ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಯಾವುದೇ ರೀತಿಯ ಚರ್ಚೆ ನಡೆದಿಲ್ಲ. ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೋ ಅದಕ್ಕೆ ನಾನು ಬದ್ಧ ಎಂದರು.

ಕೆ.ಆರ್.ಪೇಟೆಯಿಂದ ಕಣಕ್ಕಿಳಿಯುತ್ತೀರ ಎಂಬ ಮಾಧ್ಯಮದವರ ಪ್ರಶ್ನೆಗೆ ನಮ್ಮದು ಕಾರ್ಯಕರ್ತರ ಆಧಾರಿತ ಪಕ್ಷ. ಇಲ್ಲಿ ನನ್ನ ಅಭಿಪ್ರಾಯಕ್ಕಿಂತ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯ ಮುಖ್ಯವಾಗುತ್ತದೆ. ವರಿಷ್ಠರು ಏನು ಸೂಚನೆ ಕೊಡುತ್ತಾರೋ ಅದಕ್ಕೆ ಎಲ್ಲರೂ ತಲೆಬಾಗಬೇಕಾಗುತ್ತದೆ ಎಂದು ಹೇಳಿದರು.

ಉಪಚುನಾವಣೆಯಲ್ಲಿ ಯಾವ ಕ್ಷೇತ್ರಕ್ಕೆ ಯಾರನ್ನೂ ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ. ಎಲ್ಲರೂ ಒಗ್ಗಟ್ಟಾಗಿ ದುಡಿದು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇವೆ ಎಂದು ವಿಜೇಂದ್ರ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ