ಮೌಲಾಮೈನ್ ಜಿಲ್ಲೆಯಲ್ಲಿ ಭಾರೀ ಮಳೆ, ಭೀಕರ ಪ್ರವಾಹ ಹಿನ್ನಲೆ-ಭೂಕುಸಿತಕ್ಕೆ 59 ಜನರ ಸಾವು

ಮೌಲಾಮೈನ್, ಆ.12– ಮ್ಯಾನ್ಮಾರ್‍ನ ಮೌಲಾಮೈನ್ ಜಿಲ್ಲೆಯಲ್ಲಿ ಭಾರೀ ಮಳೆ, ಭೀಕರ ಪ್ರವಾಹ ಮತ್ತು ಭೂ ಕುಸಿತಗಳಿಂದ ಮೃತಪಟ್ಟವರ ಸಂಖ್ಯೆ 59ಕ್ಕೇರಿದೆ.
ವಿನಾಶಕಾರಿ ಪ್ರಕೃತಿ ವಿಕೋಪದಲ್ಲಿ ಅನೇಕರು ಗಾಯಗೊಂಡಿದ್ದು, ಕೆಲವರು ಕಣ್ಮರೆಯಾಗಿರುವುದರಿಂದ ಸತ್ತವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ಪ್ರವಾಹ ಮತ್ತು ಭೂ ಕುಸಿತದಿಂದ ಸಹಸ್ರಾರು ಮಂದಿ ನಿರಾಶ್ರಿತರಾಗಿದ್ದು , ನೂರಾರು ಮನೆಗಳು ಮತ್ತು ಹತ್ತಾರು ಸೇತುವೆಗಳು ಕುಸಿದು ಜನರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ಪ್ರವಾಹ ಮತ್ತು ಭೂ ಕುಸಿತ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರ ನೆರವಿಗಾಗಿ ಸೇನೆಯನ್ನು ರವಾನಿಸಲಾಗಿದ್ದು , ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ