ತುಂಗಭದ್ರಾ ಡ್ಯಾಂನ ನೀರಿನ ರಭಸಕ್ಕೆ ಕೊಚ್ಚಿಹೋದ ಎಡದಂಡೆಯ ಉಪ ಕಾಲುವೆ ಗೇಟ್

ಕೊಪ್ಪಳ: ಕೊಪ್ಪಳ ತಾಲೂಕಿನ ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆಯ ಉಪ ಕಾಲುವೆಯ ಉಪ ಕಾಲುವೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಪಂಪಾವನದ ಅರ್ಧ ಭಾಗ ನೀರು ತುಂಬಿಕೊಂಡಿದೆ.

ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕಾಲುವೆ ಸೇರಿದಂತೆ ನದಿಪಾತ್ರಕ್ಕೆ ನೀರನ್ನು ಹರಿ ಬಿಡಲಾಗುತ್ತಿದೆ.

ತುಂಗಭದ್ರಾ ಪಕ್ಕದಲ್ಲೇ ಇರುವ ಪಂಪಾವನದ ಬಳಿ ಇರುವ ಉಪ ಕಾಲುವೆ ಗೇಟ್ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಇದರಿಂದ ಅಪಾರ ಪ್ರಮಾಣದ ನೀರು ಭೋರ್ಗರೆಯುತ್ತಿದೆ.‌ ನೀರು ಹರಿಯುವುದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಸುತ್ತಲಿನ ಜನರಲ್ಲಿ ಆತಂಕ ಮನೆ ಮಾಡಿದೆ.

ಪಂಪಾವನ ಪಕ್ಕದ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನೀರಾವರಿ ತಜ್ಞರು ಸೇರಿ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ