ಬೆಂಗಳೂರು,ಆ.15-ಪ್ರವಾಹ ಸಂತ್ರಸ್ತ ಜಿಲ್ಲೆಗಳ ಮರುನಿರ್ಮಾಣಕ್ಕಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಯಮಿಗಳು ಹಾಗೂ ಸಂಸ್ಥೆಗಳ ಮೊರೆ ಹೋಗಿದ್ದು, 10 ಕೋಟಿ ರೂ.ಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಪುನಶ್ಚೇತನಗೊಂಡ ಗ್ರಾಮಗಳಿಗೆ ಇಡುವ ಪ್ರಸ್ತಾಪವನ್ನು ಜೆಡಿಎಸ್ ಟೀಕಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, 10 ಕೋಟಿ ರೂ.ದೇಣಿಗೆ ನೀಡಿದ ಕಂಪನಿಗಳ ಹೆಸರನ್ನು ಗ್ರಾಮಗಳಿಗೆ ಇಡುವ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರ ತುಘಲಕ್ ನಿರ್ಧಾರದಂತಿದೆ ಎಂದು ಜೆಡಿಎಸ್ ಕಿಡಿಕಾರಿದೆ.
ಹತ್ತು ಕೋಟಿ ದೇಣಿಗೆ ನೀಡಿದ ಕಂಪೆನಿಗಳ ಹೆಸರನ್ನು ಗ್ರಾಮಗಳಿಗೆ ಇಡುವ ಮುಖ್ಯಮಂತ್ರಿ ನಿರ್ಧಾರ ತುಘಲಕ್ ನಿರ್ಧಾರದಂತಿದೆ.ನಮ್ಮ ರಾಜ್ಯದ ಪ್ರತೀ ಗ್ರಾಮದ ಹೆಸರಿಗೂ ಅದರದ್ದೇ ಆದ ಹಿನ್ನೆಲೆಯಿದೆ.ನೆರೆಯಿಂದ ಎಲ್ಲವನ್ನೂ ಕಳೆದುಕೊಂಡಿರುವವರಿಗೆ ತಮ್ಮ ಗ್ರಾಮದ ಹೆಸರನ್ನೂ ಕಳೆದುಕೊಳ್ಳುವಂತೆ ಮಾಡಬೇಡಿ.ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ.
ನಮ್ಮ ರಾಜ್ಯದ ಪ್ರತೀ ಗ್ರಾಮದ ಹೆಸರಿಗೂ ಅದರದ್ದೇ ಆದ ಹಿನ್ನೆಲೆಯಿದೆ.ನೆರೆಯಿಂದ ಎಲ್ಲವನ್ನೂ ಕಳೆದುಕೊಂಡಿರುವವರಿಗೆ ತಮ್ಮ ಗ್ರಾಮದ ಹೆಸರನ್ನೂ ಕಳೆದುಕೊಳ್ಳವಂತೆ ಮಾಡಬೇಡಿ, ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ ಎಂದು ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಬುಧವಾರ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉದ್ಯಮಿಗಳೊಂದಿಗೆ ನಡೆದ ಸಭೆಯಲ್ಲಿ ಪ್ರವಾಹದಿಂದಾಗಿ ರಾಜ್ಯದಲ್ಲಿ ತೀವ್ರ ಸಂಕಷ್ಟ ತಲೆದೋರಿದೆ. ಸಾವಿರಾರು ಹಳ್ಳಿಗಳು ನೆರೆಯಿಂದ ಮುಳುಗಡೆಯಾಗಿವೆ. ಸಾವಿರಾರು ಕೋಟಿ ನಷ್ಟ ಸಂಭವಿಸಿದೆ.ಪುನಃ ಈ ಗ್ರಾಮಗಳ ಪುನಶ್ಚೇತನಕ್ಕೆ ಭಾರೀ ಹಣದ ಅವಶ್ಯಕತೆ ಇದೆ.ಹೀಗಾಗಿ ಉದ್ಯಮಿಗಳು ನೆರೆ ಪರಿಹಾರಕ್ಕೆ 10 ಕೋಟಿಗಿಂತ ಅಧಿಕ ದೇಣಿಗೆ ನೀಡಿದರೆ ಅವರ ಹೆಸರನ್ನು ಆ ಗ್ರಾಮಗಳಿಗೆ ನಾಮಕರಣ ಮಾಡುವುದಾಗಿ ತಿಳಿಸಿದ್ದರು.
ಸಿಎಂ ಯಡಿಯೂರಪ್ಪ ಅವರ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ಜೆಡಿಎಸ್, ಸಿಎಂ ನಿರ್ಧಾರ ತುಘಲಕ್ ನಿರ್ಧಾರದಂತಿದೆ.ನಮ್ಮ ರಾಜ್ಯದ ಪ್ರತೀ ಗ್ರಾಮದ ಹೆಸರಿಗೂ ಅದರದ್ದೇ ಆದ ಹಿನ್ನೆಲೆಯಿದೆ.ನೆರೆಯಿಂದ ಎಲ್ಲವನ್ನೂ ಕಳೆದುಕೊಂಡಿರುವವರಿಗೆ ತಮ್ಮ ಗ್ರಾಮದ ಹೆಸರನ್ನೂ ಕಳೆದುಕೊಳ್ಳುವಂತೆ ಮಾಡಬೇಡಿ.ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ ಎಂದು ಖಾರವಾಗಿ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದೆ.