ಕುಮಾರಸ್ವಾಮಿಯವರಿಗೆ ದೇವರು ಒಳ್ಳೆಯದನ್ನು ಮಾಡಲಿ-ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.19-ನಾಳೆ ಬೆಳಗ್ಗೆ 10.30 ರಿಂದ 11.30ರೊಳಗೆ ರಾಜಭವನದಲ್ಲಿ ನೂತನ ಸಚಿವರ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಕುರಿತಂತೆ ಈಗಾಗಲೇ ರಾಜ್ಯಪಾಲ ವಿ.ಆರ್.ವಾಲಾಗೆ ಮಾಹಿತಿ ನೀಡಿದ್ದೇವೆ. ನೂತನ ಸಚಿವರಿಗೆ ಅಧಿಕಾರ ಗೌಪ್ಯತೆ ಬೋಧಿಸಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಹೇಳಿದರು.

10.30 ರಿಂದ 11.30ರೊಳಗೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಸಂಪುಟಕ್ಕೆ ಯಾರ್ಯಾರು? ಎಷ್ಟುಮಂದಿ ?ಸೇರ್ಪಡೆಯಾಗಲಿದ್ದಾರೆ ಎಂಬುದು ಸಂಜೆಯೊಳಗೆ ತಿಳಿಯಲಿದೆ ಎಂದರು.

ವರ್ಗಾವಣೆ ದಂಧೆಗೆ ಯಡಿಯೂರಪ್ಪ ತಮ್ಮ ಮಗನನ್ನು ಬಿಟ್ಟಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಅವರು ಏನೇನು ಮಾಡಿದ್ದಾರೆ ಎಂಬುದು ಜಗತ್ತಿಗೆ ಗೊತ್ತು. ನನ್ನ ಬಾಯಿಂದ ಅದನ್ನು ಏಕೆ ಹೇಳಿಸುತ್ತೀರಿ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿಯವರಿಗೆ ದೇವರು ಒಳ್ಳೆಯದನ್ನು ಮಾಡಲಿ.ನಾನು ಯಾರ ಬಗ್ಗೆಯೂ ಆರೋಪ ಮಾಡುವುದಿಲ್ಲ ಎಂದು ಅಸಮಾಧಾನದಿಂದಲೇ ಬಿಎಸ್‍ವೈ ಪ್ರತಿಕ್ರಿಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ