ಜಯಣ್ಣ ಫಿಲಂಸ್ ನೂತನ ಚಿತ್ರ ಆರಂಭ, ವಿಜಯ್‍ಕಿರಣ್ ನಿರ್ದೇಶನದಲ್ಲಿ ಗುರುನಂದನ್ ನಾಯಕರಾಗಿ ನಟನೆ

ಜಯಣ್ಣ ಫಿಲಂಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಆಗಸ್ಟ್ 19ರ ಸೋಮವಾರ ಮೋದಿ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಲವ್ ಹಾಗೂ ಕಾಮಿಡಿ ಕಥೆ ಆಧರಿಸಿರುವ ಈ ಚಿತ್ರಕ್ಕೆ ಸುಮಾರು 50ದಿನಗಳ ಚಿತ್ರೀಕರಣ ನಡೆಯಲಿದ್ದು, ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯುತ್ತಿದೆ.

ಈ ಹಿಂದೆ `ರಾಮ್ ಲೀಲಾ`, `ಸಿಂಗ` ಚಿತ್ರಗಳನ್ನು ನಿರ್ದೇಶಿಸಿದ್ದ ವಿಜಯ್ ಕಿರಣ್ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕರಾಗಿ `ಫರ್ಸ್ಟ್ ರ್ಯಾಂಕ್ ರಾಜು` ಖ್ಯಾತಿಯ ಗುರುನಂದನ್ ಅಭಿನಯಿಸುತ್ತಿದ್ದಾರೆ. ಸಾಧುಕೋಕಿಲ, ಶಿವಾರಾಜ್ ಕೆ.ಆರ್.ಪೇಟೆ, ಕಡ್ಡಿಪುಡಿ ಚಂದ್ರು, ಕುರಿ ಪ್ರತಾಪ್, ವಿಶ್ವ, ಶ್ರೀನಿವಾಸಪ್ರಭು ಮುಂತಾದವರ ತಾರಾಬಳಗ ಈ ಚಿತ್ರಕ್ಕಿದೆ. ನಾಯಕಿಯ ಆಯ್ಕೆ ನಡೆಯುತ್ತಿದೆ.

ನಿರ್ದೇಶಕರೆ ಕಥೆ, ಚಿತ್ರಕೆಥೆ ಬರೆದಿರುವ ಈ ಚಿತ್ರಕ್ಕೆ ಸಂಭಾಷಣೆಯನ್ನು ರಘು ನಿಡುವಳ್ಳಿ ಬರೆದಿದ್ದಾರೆ. ಕವಿರಾಜ್ ಗೀತರಚನೆ ಮಾಡಿದ್ದಾರೆ. ನಟರಾಜನ್ ಶಂಕರನ್ ಸಂಗೀತ ನಿರ್ದೇಶನ, ಕಿರಣ್ ಹಂಪಾಪುರ ಛಾಯಾಗ್ರಹಣ, ಮಧು ಸಂಕಲನ, ರವಿವರ್ಮ, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಮುರಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ