ರಾಜ್ಯಾದ್ಯಂತ ಮೂವರು ಭ್ರಷ್ಟಾಚಾರ ಆರೋಪಿತ ಅಧಿಕಾರಗಳ ನಿವಾಸದ ಮೇಲೆ ಎಸಿಬಿ ದಾಳಿ

ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣದಲ್ಲಿ ಮೂವರು ಸರಕಾರಿ ಅಧಿಕಾರಿಗಳ 16 ಸ್ಥಳಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.

ಮಾನತುಗೊಂಡಿರುವ ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಸ್ ಮೂರ್ತಿ, ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ಪಂಚಾಯತ್ ರಾಜ್ ಕಾರ್ಯನಿರ್ವಾಹಕ ಎಂಜಿನಿಯರ್ ಕೆ ಹನುಮಂತಪ್ಪ ಮತ್ತು ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಪಂಚಾಯತ್ ರಾಜ್ ಕಿರಿಯ ಎಂಜಿನಿಯರ್ ವಿಜಯ್ ರೆಡ್ಡಿ ಅವರಿಗೆ ಸೇರಿದ ಸ್ಥಳಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ