ಬೆಂಗಳೂರು, ಅ.3-ಗಾಂಧೀಜಿಯವರ ತತ್ವಗಳನ್ನು ಪಾಲಿಸುವುದರೊಂದಿಗೆ ಪ್ಲಾಸ್ಟಿಕ್ ಮುಕ್ತ ಸ್ವಚ್ಛ ನಗರ ನಿರ್ಮಾಣದ ಸಂಕಲ್ಪ ಮಾಡಬೇಕಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಮಹಾತ್ಮ ಗಾಂಧಿಜಿಯವರ 150ನೇ ಜಯಂತಿ ಪ್ರಯುಕ್ತ ಗಾಂಧಿ ಸೇವಾಸಪ್ತಾಹ ಅಂಗವಾಗಿ ನಡೆದ ಪಾದಯಾತ್ರೆ, ಸ್ವಚ್ಛ ಭಾರತ್ ಕಾರ್ಯಕ್ರಮಕ್ಕೆ ಕನಕಪುರ ರಸ್ತೆಯಲ್ಲಿರುವ ಬನಶಂಕರಿ ತರಕಾರಿ ಮಾರುಕಟ್ಟೆ ಬಳಿ ಚಾಲನೆ ನೀಡಿ ಮಾತನಾಡಿದ ಅವರು,ನಗರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಗಾಂಧೀಜಿಯವರ ವಿಚಾರಧಾರೆಗಳನ್ನು ಪಸರಿಸುವ ಕೆಲಸದಲ್ಲಿ ಮುತುವರ್ಜಿ ತೋರಿಸುತ್ತಿದ್ದು, ಇದಕ್ಕೆ ನಾವೆಲ್ಲಾ ಕೈ ಜೋಡಿಸಬೇಕಿದೆ ಎಂದು ಹೇಳಿದರು.
ನಂತರ ಸಂಸದ ತೇಜಸ್ವಿ ಸೂರ್ಯ ಅವರು ಸಾರಕ್ಕಿ, ಶಾಕಂಬರಿನಗರ ಹಾಗೂ ಜೆ.ಪಿ.ನಗರ ವಾರ್ಡ್ಗಳಲ್ಲಿ ಪಾದಯಾತ್ರೆ ನಡೆಸಿದರು.
ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷರಾದ ಪಿ.ಎನ್.ಸದಾಶಿವ, ಮಾಜಿ ಮಹಾಪೌರರಾದ ಎಸ್.ಕೆ.ನಟರಾಜ್, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು..