ಶಾಸಕ ಜಮೀರ್ ಅಹಮ್ಮದ್​​ ಖಾನ್​​​​ಗೆ ಲಘು ಹೃದಯಾಘಾತ

ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ಅಹಮ್ಮದ್ಖಾನ್ಲಘು ಹೃದಯಾಘಾತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ
ಶನಿವಾರ ಬೆಳಗ್ಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು. ಈ ವೇಳೆ ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ. ಈ ವೇಳೆ ಅವರಿಗೆ ಲಘು ಹೃದಯಾಘಾತವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಲಘು ಹೃದಯಾಘಾತಕ್ಕೆ ಒಳಗಾಗಿರುವ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು,  ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡುವ ಸಾಧ್ಯತೆ ಇದೆ.

ಐಎಂಎಂ ಪ್ರಕರಣದಲ್ಲಿ ಜಮೀರ್​ ಅಹ್ಮದ್​ ಖಾನ್​ ಹೆಸರು ಕೇಳಿ ಬಂದಿದ್ದು, ಈ ಪ್ರಕರಣದ ಕುರಿತು ಅವರು ವಿಚಾರಣೆಗೂ ಹಾಜರಾಗಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ