ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ; ಇಬ್ಬರು ಸೈನಿಕರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಘರ್​ ಭಾಗದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ. ಈ ವೇಳೆ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಓರ್ವ ನಾಗರಿಕ ಮೃತಪಟ್ಟಿದ್ದಾನೆ.
ಪಾಕಿಸ್ತಾನ ಭಾನುವಾರ ಬೆಳಗ್ಗೆ ಭಾರತದ ಗಡಿ ಭಾಗದಲ್ಲಿ ಗುಂಡು ಹಾರಿಸಿದೆ. ಈ ವೇಳೆ ಗುಂಡೇಟು ತಗುಲಿ ಇಬ್ಬರು ಯೋಧರು ಸ್ಥಳದಲ್ಲೇ ಹುತಾತ್ಮರಾಗಿದ್ದಾರೆ. ಅಲ್ಲದೆ, ನಾಗರಿಕನಿಗೂ ಗುಂಡೇಟು ತಗುಲಿತ್ತು. ಕೆಲ ಮನೆಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.
ಗಡಿ ನಿಯಂತ್ರಣ ರೇಖೆ ಬಳಿ ಈ ವರ್ಷ ಒಟ್ಟು 2,000 ಬಾರಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ. ಇದರಿಂದ ಅನೇಕರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕದನ ವಿರಾಮ ನಿಲ್ಲಿಸುವಂತೆ ಪಾಕಿಸ್ತಾನ ನಿರಂತರವಾಗಿ ಈ ಬಗ್ಗೆ ಹೇಳುತ್ತಲೇ ಇದೆ. ಆದರೆ, ಪಾಕ್​ ಇದರಲ್ಲಿ ನಮ್ಮ ಕೈವಾಡ ಇಲ್ಲ ಎಂದು ಹೇಳಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ