ಚೆನ್ನೈ:ಏ-3: ಸುಪ್ರೀಂ ಆದೇಶದಂತೆ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆಗ್ರಹಿಸಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
ಇಂದು ಬೆಳಿಗ್ಗೆ ಮರೀನಾ ಬೀಚ್ ಸಮೀಪದ ಚೆಪುಕ್’ಗೆ ಆಗಮಿಸಿದ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದು, ಈ ಮೂಲಕ ಈಗಾಗಲೇ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಂತಾಗಿದೆ.
ಕಾವೇರಿ ವಿವಾದ ಸಂಬಂಧ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕೊಯಿಮತ್ತೂರಿನಲ್ಲಿ ವ್ಯಾಪಾರಿಗಳ ಸಂಘಟನೆ ಬೆಂಬಲ ವ್ಯಕ್ತಪಡಿಸಿದ್ದು, ಮಾರುಕಟ್ಟೆಗಳನ್ನು ಬಂದ್ ಮಾಡಿವೆ. ಈ ನಡುವೆ ತಮಿಳುನಾಡು ರಾಜ್ಯಪಾಲ ಬರ್ವಾರಿಲಾಲ್ ಪುರೋಹಿತ್ ಅವರು ವಿವಾದ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಇನ್ನು ಕಾವೇರಿ ವಿವಾದ ಸಂಬಂಧ ಬಿಜೆಪಿ ವಿರುದ್ಧ ಹರಿಹಾಯ್ದಿರುವ ತಮಿಳುನಾಡಿನ ರಾಜಕೀಯ ನಾಯಕರು, ಕಾವೇರಿ ನಿರ್ವಹಣಾ ಮಂಡಳಿಗೆ ಕರ್ನಾಟಕ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಕರ್ನಾಟಕದ ಪರ ಎಂಬಂತೆ ವರ್ತಿಸುತ್ತಿದೆ ಎಂದು ಹೇಳಿದ್ದಾರೆ.
Cauvery dispute, Tamil Nadu, CM palaniswami, panner selwam, Hunger strike