ನವದೆಹಲಿ, ಏ.3- ಕಾವೇರಿ ಜಲ ವಿವಾದ ತೀರ್ಪು ಕುರಿತು ಸ್ಪಷ್ಟೀಕರಣ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಏ.9ರಂದು ಕೈಗೆತ್ತಿಕೊಳ್ಳಲಿದೆ.
ಕಾವೇರಿ ನಿರ್ವಹಣಾ ಮಂಡಲಿ ರಚನೆ ಮತ್ತು ಯೋಜನೆ ಅನುಷ್ಠಾನ ವಿಷಯಕ್ಕೆ ಸಂಬಂಧಪಟ್ಟಂತೆ ನಾಲ್ಕೂ ರಾಜ್ಯಗಳಲ್ಲಿ ವಿಭಿನ್ನ ನಿಲುವು ಮತ್ತು ಅಭಿಪ್ರಾಯಗಳಿವೆ. ಹೀಗಾಗಿ ಈ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದೆ ಎಂದು ಕೋರಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಮನವಿ ಸಲ್ಲಿಸಿತ್ತು.
ಕಾವೇರಿ ನಿರ್ವಹಣಾ ಮಂಡಳಿ ರಚಿಸಿಲ್ಲ ಎಂಬ ಕಾರಣಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಕೂಡ ಅದೇ ದಿನ ಸುಪ್ರೀಂಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ. ಈ ಎರಡೂ ಅರ್ಜಿಗಳ ಕುರಿತು ಏ.9ರಂದೇ ವಿಚಾರಣೆ ನಡೆಯುವುದರಿಂದ ಮುಂದಿನ ಬೆಳವಣಿಗೆ ಕುತೂಹಲ ಸೃಷ್ಟಿಸಿದೆ.
ಕಾವೇರಿ ನಿರ್ವಹಣಾ ಮಂಡಲಿ ರಚನೆ ಮತ್ತು ಯೋಜನೆ ಅನುಷ್ಠಾನ ವಿಷಯಕ್ಕೆ ಸಂಬಂಧಪಟ್ಟಂತೆ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪಾಂಡಿಚೇರಿ ರಾಜ್ಯಗಳಲ್ಲಿ ಬೇರೆಬೇರೆ ಅಭಿಪ್ರಾಯಗಳಿವೆ. ಈ ಕುರಿತು ಒಮ್ಮತ ಮೂಡಿಸಲು ಈ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದೆ ಎಂದು ಕೋರಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಮನವಿ ಸಲ್ಲಿಸಿತ್ತು.