ಕಾವೇರಿ ನೀರು ನಿರ್ವಹಣಾ ಮಂಡಳಿ : ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಇಂದು ಪ್ರಧಾನಿ ಭೇಟಿ

ನವದೆಹಲಿ, ಏ.3-ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡಿನಲ್ಲಿ ಹೋರಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಪ್ರಧಾನಿಯವರನ್ನು ಭೇಟಿ ಮಾಡುತ್ತಿದ್ದಾರೆ. ತಮಿಳುನಾಡಿನಲ್ಲಿ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಬಗ್ಗೆಯೂ ಗಮನ ಸೆಳೆಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮಂಡಳಿ ರಚನೆಗೆ ಸಂಬಂಧಿಸಿದಂತೆ ಪ್ರಧಾನಿಯವರೊಂದಿಗೆ ರಾಜ್ಯಪಾಲರು ಸಮಾಲೋಚನೆ ನಡೆಸಲಿದ್ದಾರೆ.
ಈ ನಡುವೆ ಮಂಡಳಿ ರಚನೆಗಾಗಿ ಆಗ್ರಹಿಸಿ ಎಐಎಡಿಎಂಕೆ ಸಂಸದರು, ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶೀಘ್ರವಾಗಿ ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ