ಬೆಂಗಳೂರು: ಅನರ್ಹ ಶಾಸಕರ ಹಣೆ ಬರಹ ಸುಪ್ರೀಂ ಕೋರ್ಟ್ನಲ್ಲಿ ತೀರ್ಮಾನವಾಗಿದೆ. 17 ಜನ ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ತೀರ್ಮಾನವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ ಹಾಲಿ ವಿಧಾನಸಭೆ ಅವಧಿ ಮುಗಿಯುವವರೆಗೆ ಚುನಾವಣೆಗೆ ಸ್ಪರ್ಧಿಸದಂತೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿದೆ.
ಅಷ್ಟೇ ಅಲ್ಲದೆ ವಿಧಾನಸಭೆಗೆ ಮರು ಆಯ್ಕೆ ಆಗುವವರಗೆ ಸಚಿವ ಸ್ಥಾನ ಸೇರಿದಂತೆ ಸರಕಾರಿ ಹುದ್ದೆಯನ್ನು ಹೊಂದುವಂತಿಲ್ಲ ಎಂದು ಹೇಳಿದೆ. 15 ಕ್ಷೇತ್ರಗಳಿಗೆ ಡಿಸೆಂಬರ್ 5ಕ್ಕೆ ಉಪಚುನಾವಣೆ ಘೋಷಣೆ ಆಗಿರುವುದರಿಂದ ಅನರ್ಹ ಶಾಸಕರು ಚುನಾವಣೆ ಸ್ಪರ್ಧಿಸಿ ಗೆದ್ದು ಸಂಪುಟ ಸೇರುವ ಉಮೇದಿನಲ್ಲಿದ್ದಾರೆ. ಆದರೆ ಮಸ್ಕಿ ಕ್ಷೇತ್ರದ ಶಾಸಕ ಪ್ರತಾಪ್ ಗೌಡ ಪಾಟೀಲ್ ಮತ್ತು ಆರ್.ಆರ್. ನಗರದ ಮುನಿರತ್ನ ಸ್ಥಿತಿ ತ್ರಿಶಂಕು ಸ್ವರ್ಗದಂತಾಗಿದೆ.

ಸುಪ್ರೀಂ ಕೋರ್ಟ್ ಇವರ ಅನರ್ಹತೆಯನ್ನು ಎತ್ತಿ ಹಿಡಿದಿದೆ. ಜೊತೆಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದೆ. ಆದರೆ ಇವರ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಚುನಾವಣೆಯನ್ನೇ ಘೋಷಣೆ ಮಾಡಿಲ್ಲ. ಎರಡೂ ಕ್ಷೇತ್ರಗಳಲ್ಲಿ 2018ರ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳು ಚುನಾವಣಾ ಫಲಿತಾಂಶ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿರುವುದರಿಂದ ಇವರ ಕ್ಷೇತ್ರಗಳಿಗೆ ಆಯೋಗ ಚುನಾವಣೆ ಘೋಷಣೆ ಮಾಡಿರಲಿಲ್ಲ.
ಇದೀಗ ಇವರು ಅನರ್ಹಗೊಂಡಿದ್ದು, ಚುನಾವಣಾ ಆಯೋಗ ಯಾವಾಗ ಉಪಚುನಾವಣೆ ಘೋಷಣೆ ಮಾಡಲಿದೆ ಎಂಬುದನ್ನು ಕಾಯಬೇಕಿದೆ. ಇದರ ನಡುವೆ ಒಂದೊಮ್ಮೆ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಬಹುಮತಕ್ಕೆ ಬೇಕಾದಷ್ಟು ಸ್ಥಾನಗಳನ್ನು ಗೆದ್ದುಕೊಂಡಲ್ಲಿ ಇವರು ನಿರ್ಲಕ್ಷಕ್ಕೆ ಗುರಿಯಾಗುವ ಸಾಧ್ಯತೆಯೂ ಇದೆ. ಹೀಗಾಗಿ ಸದ್ಯಕ್ಕೆ ಇವರೀಗ ಅತಂತ್ರರಾಗಿದ್ದಾರೆ.