ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸುತ್ತೇನೆ- ಮಾಜಿ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್

ಕೋಲಾರ, ನ.13-ಹದಿನೇಳು ಮಂದಿ ಅನರ್ಹ ಶಾಸಕರ ವಿಷಯದಲ್ಲಿ ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪನ್ನು ಗೌರವಿಸುತ್ತೇನೆ. ನನ್ನ ತೀರ್ಪನ್ನು ಎತ್ತಿ ಹಿಡಿದಿರುವುದು ಖುಷಿ ತಂದಿದೆ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.

ಅನರ್ಹ ಶಾಸಕರ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಕೋರ್ಟ್ ತೀರ್ಪನ್ನು ನಾನು ಗೌರವಿಸುತ್ತೇನೆ. ಅನರ್ಹತೆಯನ್ನು ಒಪ್ಪಿಕೊಂಡಿರುವ ಸುಪ್ರೀಂ ಉಳಿದ ಸದನದ ಅವಧಿಗೆ ಕೊಟ್ಟಿರುವ ನನ್ನ ವ್ಯಾಖ್ಯಾನವನ್ನು ಒಪ್ಪದಿರುವ ಬಗ್ಗೆ ದೇಶದಲ್ಲಿ ಚರ್ಚೆಯಾಗಬೇಕಿದೆ ಎಂದು ಹೇಳಿದರು.

ಸುಪ್ರೀಂಕೋರ್ಟ್ ನನ್ನ ನಿಲುವನ್ನು ಒಪ್ಪಿಕೊಂಡಿದೆ. ಅನರ್ಹತೆ ಒಂದು ಶಿಕ್ಷೆಯಾದರೆ, ಮತ್ತೆ ಚುನಾವಣೆಗೆ ನಿಲ್ಲಬಹುದೆಂದು ಸುಪ್ರೀಂ ಒಪ್ಪಿಗೆ ನೀಡಿದೆ. ಮುಂದೆ ಜನತಾನ್ಯಾಯಾಲಯ ಇದನ್ನು ತೀರ್ಮಾನ ಮಾಡಬೇಕಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ನನ್ನ ಗೆಳೆಯರು. ಪಕ್ಷದ ಉದ್ದೇಶದಿಂದಲೇ ನಾನು ಸ್ಪೀಕರ್ ಆದೆ. ನನ್ನ ಹುದ್ದೆಯಲ್ಲಿ ಗೌರವಯುತವಾಗಿ ನಡೆದುಕೊಂಡಿದ್ದೇನೆ.

ಸುಪ್ರೀಂಕೋರ್ಟ್ ನನಗೆ ತೀರ್ಮಾನ ಕೊಟ್ಟಾಗಲೂ ಗೌರವದಿಂದಲೇ ನಡೆದುಕೊಂಡಿದ್ದೇನೆ. ನನ್ನ ತೀರ್ಪನ್ನು ಎತ್ತಿ ಹಿಡಿದಿರುವುದು ಸಂತಸ ತಂದಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ