ನವದೆಹಲಿ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಕಡಿತಗೊಳಿಸುವ ಕುರಿತು ಕೇಂದ್ರ ಸರ್ಕಾರ ಮಹತ್ವದ ನಿಲುವು ಪ್ರಕಟಿಸಿದೆ.
ಹೌದು.. ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 58 ವರ್ಷಕ್ಕೆ ಇಳಿಸಲು ಮೋದಿ ಸರ್ಕಾರ ಯೋಜಿಸುತ್ತಿದೆ ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ಅಲ್ಲಗಳೆದಿದೆ. ಅಲ್ಲದೆ ಅಂತಹ ಯಾವುದೇ ನೀತಿ ನಿರ್ಧಾರಗಳಿಲ್ಲ ಎಂದು ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ.
ಪ್ರಧಾನಿ ಕಚೇರಿಯಲ್ಲಿ (ಪಿಎಂಒ) ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಕುರಿತು ಮೋದಿ ಸರ್ಕಾರದ ನಿಲುವನ್ನು ಪ್ರಕಟಿಸಿದರು.
‘ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 58 ವರ್ಷಕ್ಕೆ ಇಳಿಸಲು ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪವಿದೆಯೇ ಅಥವಾ ಕಡ್ಡಾಯ ನಿವೃತ್ತಿಯ 56 (ಜೆ) ಕಲಂ ಅಡಿಯಲ್ಲಿ 50 ವರ್ಷ ದಾಟಿದವರಿಗೆ ಕಡ್ಡಾಯ ನಿವೃತ್ತಿ ಬಗೆಗೆ ಯಾವುದೇ ಪ್ರಸ್ತಾಪವಿದೆಯೇ” ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿತೇಂದ್ರ ಸಿಂಗ್ ಅವರು, ‘ನವೆಂಬರ್ 27 ರಂದು ಲೋಕಸಭೆಯಲ್ಲಿ ಉತ್ತರಿಸುತ್ತಾ, “ಪ್ರಸ್ತುತ, ನಿವೃತ್ತಿಯ ವಯಸ್ಸನ್ನು 60 ವರ್ಷದಿಂದ 58 ವರ್ಷಕ್ಕೆ ಇಳಿಸುವ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದರು.