ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದ ಬಗ್ಗೆ ಪುತ್ರ ಡಾ. ಯತೀಂದ್ರ ಹೇಳಿದ್ದೇನು?

ಬೆಂಗಳೂರು:  ನಿನ್ನೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.  ಬುಧವಾರ ಬೆಳಗ್ಗೆ ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಸ್ಪತ್ರೆಯಲ್ಲಿ ಅವರು  ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆಗೆ  ಒಳಗಾಗಿದ್ದು, ಗುರುವಾರ ಮಧ್ಯಾಹ್ನದ ವೇಳೆಗೆ ಸಿದ್ದರಾಮಯ್ಯ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿತ್ತು.

ಈ ಕುರಿತು ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರೇ ಈ ಬಗ್ಗೆ ಮಾತನಾಡಿದ್ದು, ತಂದೆಯವರಿಗೆ ಹೃದಯ ಸಮಸ್ಯೆ  ಇತ್ತು. ಡಾ. ರಮೇಶ್ ಅವರು ಮೊದಲಿನಿಂದ ನೋಡಿಕೊಳ್ಳುತ್ತಿದ್ದರು. ಈ ಹಿಂದೆಯೂ ಇದೇ ರೀತಿ ಆಂಜಿಯೋಪ್ಲ್ಯಾಸ್ಟ್ ಆಗಿತ್ತು. ಹೃದಯಕ್ಕೆ ರಕ್ತ ಪರಿಚಲನೆ ಸರಿಯಾಗಿ ಇಲ್ಲ ಅನ್ನೊದನ್ನ ವೈದ್ಯರು ಬುಧವಾರ ಬೆಳಗ್ಗೆ ತಪಾಸಣೆ ವೇಳೆ ತಿಳಿಸಿದರು. ಹಾಗಾಗಿ ತಂದೆಯವರಿಗೆ ಅಂಜಿಯೋ ಗ್ರಾಂ ಮಾಡಿ ಎಂದವರು ಸಲಹೆ ನೀಡಿದರು. ವೈದ್ಯರ ಸಲಹೆ ಮೇರೆಗೆ ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸಗೆ ತಂದೆಯವರು ಒಳಗಾಗಿದ್ದಾರೆ.  ಗುರುವಾರ ಬೆಳಗ್ಗೆವರೆಗೆ  ತಂದೆಯವರು ತೀವ್ರ ನಿಗಾ ಘಟಕದಲ್ಲಿ ಇರಲಿದ್ದಾರೆ. ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಮ್ಮ ತಂದೆಯವರಿಗೆ ಹೃದಯ ಸಮಸ್ಯೆ ಇತ್ತು ಡಾ. ರಮೇಶ್ ಅವರು ಮೊದಲಿನಿಂದಲೂ ನೋಡಿಕೊಳ್ಳುತ್ತಿದ್ದರು,ಈ ಹಿಂದೆ ಇದೇ ರೀತಿ ಆಂಜಿಯೋಪ್ಲ್ಯಾಸ್ಟ್ ಆಗಿತ್ತು,ಹೃದಯಕ್ಕೆ ರಕ್ತ ಪರಿಚಲನೆ ಸರಿಯಾಗಿ ಇಲ್ಲ ಅನ್ನೊದನ್ನ ವೈದ್ಯರು ಇಂದು ಬೆಳಗ್ಗೆ ತಪಾಸಣೆ ವೇಳೆ ತಿಳಿಸಿದರು,ವೈದ್ಯರ ಸಲಹೆ ಮೇರೆಗೆ ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆಗೆ ಅಪ್ಪ ಒಳಗಾಗಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಸ್ವತಃ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದು, ವೈದ್ಯರ ಸಲಹೆ ಮೇರೆಗೆ ಇಂದು(ಬುಧವಾರ) ಸಂಜೆ ಹೃದಯಕ್ಕೆ ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆ ಮಾಡಿಸಿಕೊಂಡಿದ್ದೇನೆ.‌ ಸದ್ಯ ಆಸ್ಪತ್ರೆಯಲ್ಲಿದ್ದು ಗುರುವಾರ ಮನೆಗೆ ಹೋಗಿ ಕೆಲವು ದಿನ ವಿಶ್ರಾಂತಿ ಪಡೆಯುತ್ತೇನೆ. ಆರೋಗ್ಯವಾಗಿದ್ದೇನೆ. ಯಾರೂ ಆತಂಕಪಡಬೇಕಾಗಿಲ್ಲ ಎಂದು ತಿಳಿಸಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಇಂದು ಸಂಜೆ ಹೃದಯಕ್ಕೆ ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆ ಮಾಡಿಸಿಕೊಂಡಿದ್ದೇನೆ.‌

ಸದ್ಯ ಆಸ್ಪತ್ರೆಯಲ್ಲಿದ್ದು ನಾಳೆ ಮನೆಗೆ ಹೋಗಿ ಕೆಲವು ದಿನ ವಿಶ್ರಾಂತಿ ಪಡೆಯುತ್ತೇನೆ. ಆರೋಗ್ಯವಾಗಿದ್ದೇನೆ.
ಆತಂಕಪಡಬೇಕಾಗಿಲ್ಲ.

ಈ ವಿಷಯದ ಬಗ್ಗೆ ಹೆಚ್ಚಿನ ಚರ್ಚೆ ಬೇಡ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ