ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ-ಬುಧವಾರ ಅಂತಿಮ ನಿರ್ಧಾರ-ಸಚಿವ ಎಸ್.ಸುರೇಶ್‍ಕುಮಾರ್

ಬೆಂಗಳೂರು, ಡಿ.16- ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಬಗ್ಗೆ ಬುಧವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಬಗ್ಗೆ ಬುಧವಾರ ಸಭೆ ನಡೆಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಪಬ್ಲಿಕ್ ಪರೀಕ್ಷೆ ನಡೆಸುವ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗ ಆಕ್ಷೇಪವೆತ್ತಿತ್ತು. ಆಯೋಗದೊಂದಿಗೆ ಸಭೆ ನಡೆಸಿ ಈ ವರ್ಷ 7ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಿದರೂ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡುವುದಿಲ್ಲ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗುವುದನ್ನು ತಪ್ಪಿಸಲು 7ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಅನುಭವವಾಗಲಿ ಎಂಬುದು ಸರ್ಕಾರದ ಉದ್ದೇಶ. ಈ ವಿಚಾರವನ್ನು ಮಕ್ಕಳ ಹಕ್ಕುಗಳ ಆಯೋಗಕ್ಕೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.

ಶಾಲಾ ಪಠ್ಯದಲ್ಲಿ ಟಿಪ್ಪು ಪಠ್ಯ ಅಳವಡಿಕೆ ಸಂಬಂಧ ಇನ್ನೂ ವರದಿ ತಮಗೆ ಬಂದಿಲ್ಲ. ವರದಿ ಬಂದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ