ಬೆಂಗಳೂರು,ಏ.5- ಜೈ ವಿಜಯ ಭಾರತಿ ಪಾರ್ಟಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿತು. ಇದೇ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಯಿತು. ಪತ್ರಿಕಾಗೋಷ್ಟಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಕೆ.ವಿ.ಶ್ರೀನಿವಾಸಪ್ಪ ಮಾತನಾಡಿ, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ರೈತರಿಗೂ ಉಚಿತ ವಿದ್ಯುತ್ ಹಾಗೂ ರೈತರಿಗೆ ಕೃಷಿ ಸಲಕರಣೆಗಳನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರು. ಒಂದನೇ ತರಗತಿಯಿಂದ ಪದವಿವರೆಗೆ ಎಲ್ಲರಿಗೂ ಉಚಿತ ಶಿಕ್ಷಣ, ಬಸ್ ಪಾಸ್ ವ್ಯವಸ್ಥೆಯನ್ನು ನೀಡಲಾಗುವುದು. ಎಲ್ಲ ಕುಟುಂಬಕ್ಕೂ ಕೆಜಿಗೆ 5 ರೂ.ನಂತೆ 30 ಕೆಜಿ ಅಕ್ಕಿ ವಿತರಿಸಲಾಗುತ್ತದೆ. ಪ್ರತಿ ತಾಲ್ಲೂಕು, ನಗರ, ಜಿಲ್ಲೆಗಳಲ್ಲಿ ಪತ್ರಕರ್ತರ ಬಡಾವಣೆಗಳನ್ನು ನಿರ್ಮಿಸಿ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು. ಅಂಗವಿಕಲರಿಗೆ 5 ಸಾವಿರ ಮಸಾಶನ, ವೃದ್ಧರಿಗೆ, ವಿಧವೆಯರಿಗೆ ಪ್ರತಿ ತಿಂಗಳು 3000 ರೂ. ನೀಡುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ 25 ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.