ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಹಾವಳಿ ಮುಂದುವರೆದಿದೆ. ಇಂದು ಹೊಸದಾಗಿ 5 ಕೋವಿಡ್-19 ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಈ ಪೈಕಿ ನಂಜನಗೂಡಿನ ನಾಲ್ವರು ಮತ್ತು ತುಮಕೂರಿನ ಒಬ್ಬರಿಗೆ ಸೋಂಕು ಕೊರೋನಾ ಪತ್ತೆಯಾದ ಕಾರಣ ಸೋಂಕಿತರ ಸಂಖ್ಯೆ 83ಕ್ಕೆ ಏರಿಯಾಗಿದೆ.
ಇದುವರೆಗೂ ರಾಜ್ಯದಲ್ಲಿ 88 ಪ್ರಕರಣ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ಬೆಂಗಳೂರು- 41, ಚಿಕ್ಕಬಳ್ಳಾಪುರ- 8, ಮೈಸೂರು- 12, ದಕ್ಷಿಣ ಕನ್ನಡ- 7, ಉತ್ತರ ಕನ್ನಡ- 7, ಕಲಬುರಗಿ- 3, ದಾವಣಗೆರೆ- 3, ಉಡುಪಿ- 3, ಕೊಡಗು- 1, ಧಾರವಾಡ- 1, ತುಮಕೂರಿನಲ್ಲಿ ಇಬ್ಬರಿಗೆ ಸೋಂಕು ಇರುವುದು ಧೃಡಪಟ್ಟಿದೆ. ಇದರಲ್ಲಿ ಕೇವಲ 5 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಇದವರೆಗೂ 1,071 ಸೋಂಕಿತ ಪ್ರಕರಣಗಳು ದಾಖಲಾಗಿವೆ. ಇಂದು ಪಶ್ಚಿಮ ಬಂಗಾಳದಲ್ಲಿ ಮತ್ತೋರ್ವ ಮಹಿಳೆ ಸಾವನ್ನಪ್ಪುವ ಮೂಲಕ ದೇಶದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಕೆಲವು ನಗರ ಪ್ರದೇಶಗಳಲ್ಲಿನ ಜನತೆ ಕರ್ಫ್ಯೂ ಧಿಕ್ಕರಿಸಿ ರಸ್ತೆಗಳಲ್ಲಿ ಓಡಾಡುವುದು ಮಾಡುತ್ತಿದ್ದಾರೆ. ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರ ಕರೆಗೆ ಬೆಲೆ ಕೊಡಿ ಮತ್ತು ಲಾಕ್ಡೌನ್ ಪಾಲಿಸಬೇಕು. ಪೊಲೀಸರು ಕೂಡ ನಿಮ್ಮ ಹಿತವನ್ನೇ ಬಯಸುವವರು. ಅವರೇನು ನಿಮ್ಮ ವೈರಿಗಳಲ್ಲ. ಪೊಲೀಸರಿಗೆ ಅನಿವಾರ್ಯತೆಯನ್ನು ಸೃಷ್ಟಿಸಬೇಡಿ. ಇನ್ನೂ 16 ದಿನಗಳು ನಿಮ್ಮ ಮನೆಯಲ್ಲಿಯೇ ಇರಬೇಕು ಸರ್ಕಾರ ಹೇಳಿದೆ.