ಬೆಂಗಳೂರು, ಏ.5- ಸರ್ವೀಸ್ ರಸ್ತೆಯೊಂದರಲ್ಲಿ ಜೆಸಿಬಿ ವಾಹನ ಮೂರು ಆಟೋ ಹಾಗೂ ಒಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ರಾಜಾಜಿನಗರ ಸಂಚಾರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಕಮಲಾನಗರದ ಮಹದೇವ (42) ಮೃತಪಟ್ಟ ಆಟೋ ಚಾಲಕ.
ಕುರುಬರಹಳ್ಳಿ ಸರ್ವೀಸ್ ರಸ್ತೆಯಲ್ಲಿ ಜೆಸಿಬಿ ವಾಹನವೊಂದು ರಾತ್ರಿ 7 ಗಂಟೆಯಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಮೂರು ಆಟೋಗಳಿಗೆ ಹಾಗೂ ಬೈಕ್ಗೆ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಒಂದು ಆಟೋದ ಚಾಲಕ ಮಹದೇವ ಎಂಬುವರು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಶವವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಅಪಘಾತದಿಂದಾಗಿ ಮತ್ತೊಂದು ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಾಜಿನಗರ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.