ಬೆಂಗಳೂರು,ಏ.5-ಹಾಡಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಚೋರರು ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಎಚ್ಎಎಲ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೊಡ್ಡ ನಕ್ಕುಂದಿಯ 3ನೇ ಕ್ರಾಸ್ನ ಗುರುರಾಜ ಲೇಔಟ್ ನಿವಾಸಿ ವಿಷ್ಣು ಅವರು ನಿನ್ನೆ ಬೆಳಗ್ಗೆ ಹೊರಗೆ ಹೋಗಿದ್ದರು. ಈ ವೇಳೆ ಕಳ್ಳರು ಇವರ ಮನೆಯ ಬೀಗ ಮುರಿದು ಒಳನುಗ್ಗಿ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಸಂಜೆ ವಿಷ್ಣು ಮನೆಗೆ ವಾಪಸ್ ಆದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕಳವಾಗಿರುವ ವಸ್ತುಗಳ ಮೌಲ್ಯ ಸದ್ಯಕ್ಕೆ ತಿಳಿದುಬಂದಿಲ್ಲ. ಎಚ್ಎಎಲ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.